ಬುಧವಾರ, ಜೂನ್ 23, 2021
22 °C

ಬಿಬಿಎಂಪಿಗೆ ಸೇರ್ಪಡೆಯಾದ ಗ್ರಾಮಗಳಲ್ಲಿ ಅವ್ಯವಸ್ಥೆ: ಮೂಲಸೌಕರ್ಯಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಘಟ್ಟಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಮತ್ತು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಮೂಲ ಸೌಕರ್ಯಗಳನ್ನು ದೊರಕಿಸಿ ಕೊಡಬೇಕು ಎಂದು ಪಾಲಿಕೆ ಸದಸ್ಯ ಎಸ್.ಗಂಗಾಧರ್ ಒತ್ತಾಯಿಸಿದರು.ಆವಲಹಳ್ಳಿ ಮತ್ತು ಅಂಜನಾಪುರದಲ್ಲಿ ರೂ 2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೆಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.`ಹೊಸದಾಗಿ ಪಾಲಿಕೆಗೆ ಸೇರ್ಪಡೆಯಾದ ಗ್ರಾಮಗಳು ಸಂಪೂರ್ಣ ರೆವಿನ್ಯೊ ಬಡಾವಣೆಗಳಾಗಿದ್ದು ಕುಡಿಯುವ ನೀರು, ರಸ್ತೆ, ಒಳಚರಂಡಿ ಮೊದಲಾದ ಸಮಸ್ಯೆಗಳಿವೆ. ಸರ್ಕಾರ ಕೂಡಲೇ ಕಾವೇರಿ ನೀರು ಪೂರೈಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡಬೇಕು~ ಎಂದು ಅವರು ಹೇಳಿದರು.ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವೀಂದ್ರ, ಮಾಜಿ ಸದಸ್ಯರಾದ ಸೈಯದ್ ಯೂಸುಫ್, ಸೈಯದ್ ಯಾಸಿನ್, ಕಾಂಗ್ರೆಸ್ ಮುಖಂಡರಾದ ಸೈಯದ್ ಮೋಯಿದ್ದೀನ್, ಸೈಯದ್ ಮದರ್‌ಸಾಬ್ ಮತ್ತಿತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.