ಬಿಬಿಎಂಪಿ ಇಬ್ಬರು ಎಂಜಿನಿಯರ್ ಬಂಧನ

7

ಬಿಬಿಎಂಪಿ ಇಬ್ಬರು ಎಂಜಿನಿಯರ್ ಬಂಧನ

Published:
Updated:

ಬೆಂಗಳೂರು: ಬಿಬಿಎಂಪಿಯ ಮೂರು ವಲಯ ವ್ಯಾಪ್ತಿಯ ಕಾಮಗಾರಿಗಳಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಪಾಲಿಕೆಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ (ಎಇಇ) ಸೇರಿದಂತೆ ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ.

ಗಾಂಧಿನಗರ ವಾರ್ಡ್‌ನ ಎಇಇ ಪಾಲಾಕ್ಷಯ್ಯ ಮತ್ತು ಸಿವಿಲ್ ಗುತ್ತಿಗೆದಾರ ಆನಂದ್ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನಗರದ ಎಂಟನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಧೀಶ ಕಿರಣ್‌ಕಿಣಿ ಅವರು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರು ಆರೋಪಿಗಳನ್ನು ಮಾ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry