ಭಾನುವಾರ, ಏಪ್ರಿಲ್ 11, 2021
31 °C

ಬಿರ್ಲಾ-ರಿಲಯನ್ಸ್ ಎಎಂಸಿ ಜತೆ ಸಿಂಡ್ ಬ್ಯಾಂಕ್ ಮೈತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಿರ್ಲಾ ಸನ್‌ಲೈಫ್ ಅಸೆಟ್ ಮ್ಯಾನೇಜ್‌ಮೆಂಟ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಅಸೆಟ್ ಮ್ಯಾನೇಜ್‌ಮೆಂಟ್‌ನ `ಮ್ಯೂಚುವಲ್ ಫಂಡ್~ ಯೋಜನೆಗಳನ್ನು ಮಾರಾಟ ಮಾಡುವ ಸಂಬಂಧ ಎರಡೂ ಕಂಪೆನಿಗಳ ಜತೆ ಸಿಂಡಿಕೇಟ್ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ.ಈ ಸಂಬಂಧ ಇಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ ಎಂ.ಜಿ.ಸಾಂಘ್ವಿ ಹಾಗೂ ಬಿರ್ಲಾ ಸನ್‌ಲೈಫ್ ಅಸೆಟ್ ಮ್ಯಾನೇಜ್‌ಮೆಂಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಬಾಲಸುಬ್ರಹ್ಮಣ್ಯನ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಅಸೆಟ್ ಮ್ಯಾನೇಜ್‌ಮೆಂಟ್‌ನ `ಸಿಇಒ~ ಸಂದೀಪ್ ಸಿಕ್ಕ ಅವರು ಒಪ್ಪಂದ ಪತ್ರಗಳಿಗೆ ಸಹಿ ಹಾಕಿದರು. ಸಿಂಡ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಆಂಜನೇಯ ಪ್ರಸಾದ್, ಯೋಜನೆ-ಅಭಿವೃದ್ಧಿ ವಿಭಾಗ ಪ್ರಧಾನ ವ್ಯವಸ್ಥಾಪಕ ವಿಶ್ವೇಶ್ವರ ಮತ್ತಿತರರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.