ಶುಕ್ರವಾರ, ಮೇ 7, 2021
25 °C

ಬಿ.ವಿ.ಆಚಾರ್ಯ ವಿರುದ್ಧ ತನಿಖೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಎಸ್ ಶೈಕ್ಷಣಿಕ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಮತ್ತು ಟ್ರಸ್ಟ್‌ನ ಇತರೆ ಸದಸ್ಯರ ವಿರುದ್ಧ ಚಾಮರಾಜಪೇಟೆ ನಿವಾಸಿ ಎನ್.ವೆಂಕಟೇಶಯ್ಯ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ, ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.ಒಳಸಂಚು ರೂಪಿಸಿ ಬಿಎಂಎಸ್‌ನ ಟ್ರಸ್ಟ್‌ನಲ್ಲಿ ಸೇರಿಕೊಂಡು ವಿದ್ಯಾರ್ಥಿಗಳಿಂದ ದೊಡ್ಡ ಪ್ರಮಾಣದ ವಂತಿಗೆ ಪಡೆದು ವಂಚಿಸಿರುವ ಆರೋಪದ ಮೇಲೆ ವೆಂಕಟೇಶಯ್ಯ ಅವರು ಜನವರಿಯಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.ಟ್ರಸ್ಟ್‌ನ ಅಧ್ಯಕ್ಷರಾದ ಆಚಾರ್ಯ, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು.ತಲ್ವಾರ್, ಸದಸ್ಯ ಕಾರ್ಯದರ್ಶಿ ಬಿ.ಎಸ್.ರಾಗಿಣಿ ನಾರಾಯಣ್, ಸದಸ್ಯ ಪಿ.ದಯಾನಂದ ಪೈ ಮತ್ತು ರಾಜ್ಯ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯ್‌ಗೋರೆ ಅವರನ್ನು ಆರೋಪಿಗಳೆಂದು ಹೆಸರಿಸಿದ್ದರು.ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವುದಾಗಿ ಶನಿವಾರ ಪ್ರಕಟಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ಮೇ 23ರೊಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.