ಶನಿವಾರ, ಜೂನ್ 12, 2021
24 °C

ಬಿ.ಸಿ.ಕಾವಲ್ ಅರಣ್ಯಕ್ಕೆ ಕಾಳ್ಗಿಚ್ಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರುವೇಕೆರೆ: ತಾಲ್ಲೂಕಿನ ಚಿಮ್ಮನಹಳ್ಳಿ ಸಮೀಪದ ಬಿ.ಸಿ.ಕಾವಲ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, 25 ಎಕರೆ ಅರಣ್ಯ ಹೊತ್ತಿ ಉರಿದಿದೆ ಎನ್ನಲಾಗಿದೆ.ಈ ಭಾಗದಲ್ಲಿ ಅಕೇಶಿಯಾ, ನೀಲಗಿರಿ ಮರಗಳಿದ್ದು ಸುಮಾರು 2-3 ಲಕ್ಷ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ವ್ಯಾಪಿಸದಂತೆ ನಿಯಂತ್ರಿಸಿದರು.ಅರಣ್ಯ      ಗಾರ್ಡ್‌ಗಳು, ಅರಣ್ಯ ಸಮಿತಿ ಸದಸ್ಯರು ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸದಿರುವುದರಿಂದಲೇ ಪದೇ ಪದೇ ಈ ಪ್ರದೇಶದ ಅರಣ್ಯಕ್ಕೆ ಬೆಂಕಿ ಬೀಳುತ್ತಿದೆ ಎಂದು ಸುತ್ತಮುತ್ತಲ ಗ್ರಾಮಸ್ಥರು ಆಕ್ಷೇಪಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.