ಶನಿವಾರ, ಮೇ 28, 2022
26 °C

ಬಿ.ಸಿ.ಪಾಟೀಲ್ ಉಚ್ಚಾಟನೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಿಧಾನ ಪರಿಷತ್ತಿಗೆ ನಡೆದಿರುವ ಅಡ್ಡ ಮತದಾನದಲ್ಲಿ ಶಾಸಕ ಬಿ.ಸಿ.ಪಾಟೀಲ್ ಅವರ ಕೈಚಳಕವಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು~ ಎಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.`ಬಿ.ಸಿ.ಪಾಟೀಲ್ ಕಾಂಗ್ರೆಸ್‌ಗೆ ಯಾವುದೇ ರೀತಿಯ ಕೊಡುಗೆ ನೀಡಿಲ್ಲ. ಆದರೆ, ಪಕ್ಷದಿಂದ ಅನುಕೂಲ ಪಡೆದುಕೊಂಡಿದ್ದಾರೆ. ಪೊಲೀಸ್ ಹಾಗೂ ಸಿನಿಮಾ ಕ್ಷೇತ್ರಗಳಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗದೇ ರಾಜಕೀಯದಲ್ಲಿ ಬೇಳೆ ಬೇಯಿಸಿಕೊಳ್ಳಲು ಆರಂಭಿಸಿದ್ದಾರೆ~ ಎಂದು ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದರು.`ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಇಂತಹ ವಲಸಿಗರಿಂದ ಕಾಂಗ್ರೆಸ್ ಪಕ್ಷ ಹಾಳಾಗಿದ್ದು, ಇವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಬಾರದು ಮತ್ತು ಚುನಾವಣೆಗೆ ಟಿಕೆಟ್ ನೀಡಬಾರದು~ ಎಂದು ಅವರು ಒತ್ತಾಯಿಸಿದರು.`ಈಚೆಗೆ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಲಿಂಗಾಯಿತರ ಸಭೆಯ ಬಗ್ಗೆ ಪ್ರಸ್ತಾಪಿಸಿದ್ದ ಅವರು ತಮ್ಮ ಜಾತಿಯವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ಅಧಿಕಾರಕ್ಕೆ ಬರುತ್ತದೆ ಎಂಬ ಪಾಟೀಲರ ಮಾತು ಶುದ್ದ ಸುಳ್ಳು. ಜಾತಿಯ ಆಧಾರದ ಮೇಲೆ ಹೈಕಮಾಂಡ್ ಪಕ್ಷದ ಅಧ್ಯಕ್ಷರನ್ನು ನೇಮಿಸಿಲ್ಲ~ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.