ಹಿರಿಯೂರು: ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂಬ ಸುದ್ದಿ ತಿಳಿದು ಶಿಕ್ಷಕಿ ಸೇರಿ ಎಂಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಗರದ ನೆಹರು ಮೈದಾನದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಶಾಲಾ ಆವರಣದಲ್ಲಿನ ಮರದ ಮೇಲಿಂದ ಹಲ್ಲಿಯೊಂದು ಅನ್ನದ ಪಾತ್ರೆಯಲ್ಲಿ ಬಿದ್ದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಊಟ ಬಡಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಅದಕ್ಕೂ ಮುಂಚೆ ಊಟ ಮಾಡಿದ್ದ ಮಕ್ಕಳು ಹಲ್ಲಿ ಬಿದ್ದಿದೆ ಎಂಬ ಸುದ್ದಿ ಕೇಳಿ ಗಾಬರಿಗೊಂಡಿದ್ದಾರೆ. ತಕ್ಷಣ ಅವರನ್ನೆಲ್ಲ ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿ, ಸ್ವಲ್ಪ ಸಮಯ ವಿಶ್ರಾಂತಿಯ ನಂತರ ಮನೆಗಳಿಗೆ ಕಳುಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ರೇವಣಸಿದ್ದಪ್ಪ ಸುದ್ದಿಗಾರರಿಗೆ ತಿಳಿಸಿದರು.

ಶಿಕ್ಷಕಿ ಅನುಸೂಯಮ್ಮ, ವಿದ್ಯಾರ್ಥಿಗಳಾದ ನೂರ್ಜಹಾನ್, ಸಲ್ಮಾಬಾನು, ಪೂಜಾ, ಸೌಂದರ್ಯ, ಉಮಾ, ಫಾತಿಮಾ, ನಾಗಲಕ್ಷ್ಮಿ, ನವಾಜ್ ಅಸ್ವಸ್ಥಗೊಂಡವರು. ಸಂಜೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಸಭೆ ನಡೆಸಿ, ಬಿಸಿಯೂಟ ತಯಾರಿಸುವಲ್ಲಿ ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಬಡಿಸುವ ಮುಂಚೆ ಶಿಕ್ಷಕರು ಊಟ ಮಾಡಬೇಕು ಎಂದು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.