ಚಿಕ್ಕೋಡಿ: ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲ್ಲೂಕಿನ ಸಿದ್ದಾಪುರವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಭವಿಸಿದೆ.

ಬಿಸಿಯೂಟವನ್ನು ಮೊದಲ ಹಂತದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ಅದನ್ನು ಸೇವಿಸಿದ ವಿದ್ಯಾರ್ಥಿಗಳು ಕೊಂಚ ಗಲಿಬಿಲಿಗೊಂಡ ಹಿನ್ನೆಲೆಯಲ್ಲಿ ಉಳಿದ ವಿದ್ಯಾರ್ಥಿಗಳಿಗೆ ಆಹಾರ ವಿತರಣೆಯನ್ನು ನಿಲ್ಲಿಸಲಾಯಿತು.

ಊಟ ಮಾಡಿದ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಬಳಲಿದರೇ, ಇಬ್ಬರು ವಿದ್ಯಾರ್ಥಿಗಳು ಮಾತ್ರ ವಾಂತಿಯಿಂದ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅಂಕಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ಕರೆಯಿಸಿಕೊಂಡು ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಎಂ.ಎ.ಮಾಲಗಾಂವೆ ತಿಳಿಸಿದ್ದಾರೆ.

ಬಿಸಿಯೂಟ ತಯಾರಿಸಲು ಬಳಸಲಾದ ಎಣ್ಣೆ ಮತ್ತು ಖಾರದಲ್ಲಿ ದೋಷವಿರುವ ಹಿನ್ನೆಲೆಯಲ್ಲಿ ಮಕ್ಕಳು ಅಸ್ವಸ್ಥಗೊಂಡಿರಬಹುದು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಸಿ. ಕೃಷ್ಣಶೆಟ್ಟಿ. ಬಿಇಒ ಎಸ್.ಜೆ. ಅಂಚಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎ. ಮಾಲಗಾಂವೆ, ಡಾ.ಐ.ಎಸ್. ಹೆಬ್ಬಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.