ಬುಧವಾರ, ಜುಲೈ 15, 2020
22 °C

ಬಿಸಿಯೂಟ : 25ಮಕ್ಕಳು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಸಿಯೂಟ : 25ಮಕ್ಕಳು ಅಸ್ವಸ್ಥ

ಮಳವಳ್ಳಿ: ಬಿಸಿಯೂಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥಗೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ತಾಲ್ಲೂಕಿನ ಮಿಕ್ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಊಟ ಸೇವಿಸಿದ ಸ್ವಲ್ಪ ಹೊತ್ತಿನ ನಂತರ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದ್ದು, ಇದರಿಂದ ಉಳಿದ ಮಕ್ಕಳು ಆತಂಕದಲ್ಲಿದ್ದರು. ಅಸ್ವಸ್ಥರಾದ ಮಕ್ಕಳನ್ನು ಸ್ಥಳೀಯ ಖಾಸಗಿ ನರ್ಸಿಂಗ್‌ಹೋಂನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ನಿರಂಜನ್, ರಕ್ಷಿತಾ, ಪ್ರದೀಪ್, ತನುಜಾ ಎಂಬ ವಿದ್ಯಾರ್ಥಿಗಳನ್ನು ಮಂಡ್ಯದ ಆಸ್ಪತ್ರೆಗೆ ಹಾಗೂ ಜಯಲಕ್ಷ್ಮಿ, ಸತೀಶ್, ಸೋನಾ, ಸಿದ್ದರಾಜು, ಅಮೃತ ಎಂಬುವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುದ್ದಿ ತಿಳಿದ ತಕ್ಷಣ ತುರ್ತುವಾಹನ 108ರಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವಮಾದಪ್ಪ, ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಅರವಿಂದಪ್ಪ, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಗಣೇಶ್, ಡಾ.ಸಂಜಯ್,ಡಾ..ನಾಗರಾಜು , ಆಹಾರ ಪರಿವೀಕ್ಷಕ ಎಂ.ಕೆ.ವಿಶ್ವನಾಥ್ ಆಗಮಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.