ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿ ಯಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆಗಿದೆ.

ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಬಿ.ಎಚ್.ಕೈಮರ, ಶೆಟ್ಟಿಕೊಪ್ಪ, ಹಂತುವಾನಿ, ಕೊಸ ಗಲ್ಲು, ವರಕಟ್ಟೆ, ಬಾಳೆಕೊಪ್ಪ, ಮೆಣಸೂರು, ಮೂಡಬಾಗಿಲು ಗ್ರಾಮದಲ್ಲೂ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಿತು.

ಬೆಳಗ್ಗೆಯಿಂದಲೇ ಬಿಸಿಲಿನ ತಾಪ ಮಾನ ಹೆಚ್ಚಾಗಿತ್ತು. ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮಳೆ ಸುರಿಯಿತು. ಮಳೆಗಿಂತಲೂ ಮಿಂಚು ಗುಡುಗಿನ ಅರ್ಭಟ ಅಧಿಕವಾಗಿತ್ತು.

ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಬಿಸಿಲಿನ ಬೇಗೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಧಿಕ ಪ್ರಮಾಣದಲ್ಲಿ ಮಳೆ ಬಂದಿದ್ದರೆ ಅನುಕೂಲವಾಗುತ್ತಿತ್ತು ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಮಳೆಯಿಂದ ಹಾನಿ ಸಂಭವಿಸಿಲ್ಲ.

ಭವಾನಿಶಂಕರೇಶ್ವರ ಪೂಜೆ
ನರಸಿಂಹರಾಜಪುರ: ತಾಲ್ಲೂಕಿನ ಹೆಬ್ಬೆ ಅಭಯಾರಣ್ಯದಲ್ಲಿರುವ ಪುರಾತನ ಶ್ರೀಭವಾನಿಶಂಕರೇಶ್ವರ ದೇವಸ್ಥಾನದಲ್ಲಿ ಬುಧವಾರ ಗಣಪತಿ ಹೋಮ ಹಾಗೂ 19ರಂದು ರುದ್ರ ಹೋಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಮಂಜುನಾಥ್ ನಾಡಿಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.