ಬುಧವಾರ, ಮೇ 12, 2021
18 °C

ಬಿಸಿಸಿಐ ತುರ್ತು ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಬಿಸಿಸಿಐ ಕಾರ್ಯಕಾರಿ ಸಮಿತಿಯ ತುರ್ತು ಸಭೆ ಭಾನುವಾರ ಮಧ್ಯಾಹ್ನ ಚೆನ್ನೈನ ಪಾರ್ಕ್ ಶೆರಟಾನ್ ಹೋಟೆಲ್‌ನಲ್ಲಿ ಆರಂಭವಾಗಿದೆ.ಮಂಡಳಿಯ ಉಪಾಧ್ಯಕ್ಷರೂ ಹಾಗೂ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ,  ರಾಜೀವ್ ಶುಕ್ಲಾ ಹಾಗೂ ಅನುರಾಗ್ ಠಾಕೂರ್ ಅವರು ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗವಹಿಸಿದ್ದಾರೆಂದು ಮೂಲಗಳು ತಿಳಿಸಿವೆ.ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ರಾಜೀನಾಮೆಗೆ ಎಲ್ಲೆಡೆಯಿಂದಲೂ ಒತ್ತಡ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಈ ಸಭೆ ಭಾರಿ ಮಹತ್ಪ ಪಡೆದುಕೊಂಡಿದ್ದು, ಶ್ರೀನಿವಾಸನ್ ಪದಚ್ಯುತಿಗೆ ಕ್ಷಣಗಣನೆ ಆರಂಭವಾಗಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.