ಭಾನುವಾರ, ಮೇ 9, 2021
25 °C

ಬಿಸಿಸಿಐ : ಶ್ರೀನಿವಾಸನ್ `ಅಲಂಕಾರಿಕ ಅಧ್ಯಕ್ಷ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ):  ಎನ್. ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಲು ಒಪ್ಪಿದ್ದು, ಜಗಮೋಹನ್ ದಾಲ್ಮಿಯ ಹಂಗಾಮಿ ಅಧ್ಯಕ್ಷರಾಗಿ ಭಾನುವಾರ ಆಯ್ಕೆಯಾಗಿದ್ದಾರೆ.ಇಲ್ಲಿ ಸಭೆ ಸೇರಿದ್ದ ಬಿಸಿಸಿಐ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು.ಸ್ಪಾಟ್ - ಫಿಕ್ಸಿಂಗ್ ಹಗರಣದ ತನಿಖೆ ಪೂರ್ಣವಾಗುವವರೆಗೆ ಅಧ್ಯಕ್ಷ ಹುದ್ದೆಯಿಂದ ದೂರ ಉಳಿಯಲು ಶ್ರೀನಿವಾಸನ್ ಸಮ್ಮತಿ ಸೂಚಿಸಿದರು. ಇದೇ ಸಮಯದಲ್ಲಿ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಪಶ್ವಿಮಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಹೆಸರನ್ನು ಅರುಣ್ ಜೇಟ್ಲಿ ಸೂಚಿಸಿದರು. ನಂತರ ಸಭೆ ಇದಕ್ಕೆ ಒಪ್ಪಿಗೆ ಸೂಚಿಸಿ ಸ್ಪಾಟ್-ಫಿಕ್ಸಿಂಗ್ ಹಗರಣದ ತನಿಖೆ ಪೂರ್ಣವಾಗುವವರೆಗೂ ದಾಲ್ಮಿಯಾ ಅವರನ್ನು ಹಂಗಾಮಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.ಬಿಸಿಸಿಐ ನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದ ಸಂಜಯ್‌ಜಗದಾಳೆಗೂ ಹಾಗೂ ಖಚಾಂಚಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅಜಯ್ ಶಿರ್ಕೆ ಅವರಿಗೂ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯುವಂತೆ ಸಭೆಯಲ್ಲಿ ಸೂಚಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.