ಲಖನೌ (ಪಿಟಿಐ): `ರಾಷ್ಟ್ರೀಯ ಕ್ರೀಡಾ ಮಸೂದೆಯನ್ನು ಜಾರಿಗೆ ತರಬೇಕು ಎನ್ನುವ ಕೇಂದ್ರದ ಉದ್ದೇಶಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಸಲ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿದೆ~ ಎಂದು ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

`ಕೆಲ ದಿನಗಳ ಹಿಂದೆ ಈ ಮಸೂದೆಯನ್ನು ಮಂಡಿಸಿದಾಗ ಕೆಲ ಸಚಿವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಮಸೂದೆ ಅಂಗೀಕಾರವಾಗಿರಲಿಲ್ಲ. ಈಗ ಕೊಂಚ ಬದಲಾವಣೆ ಮಾಡಿ ಮತ್ತೆ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬಿಸಿಸಿಐ ಈ ಸಲ ಯಾವುದೇ ತಕರಾರು ತಗೆಯದೇ ಒಪ್ಪಿಕೊಳ್ಳುತ್ತದೆ~ ಎನ್ನುವ ವಿಶ್ವಾಸ ಮಾಕನ್ ಅವರದ್ದು.

ಉದ್ದೀಪನ ಮದ್ದು ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಉದ್ದೀಪನಾ ಮದ್ದು ತಡೆ ಘಟಕ (ವಾಡಾ) ರೂಪಿಸಿರುವ ಹೊಸ ನಿಯಮಾವಳಿಗಳು ಈ ನೂತನ ಮಸೂದೆಯಲ್ಲಿವೆ. ಕ್ರಿಕೆಟ್ನ ಕೆಲ ನಿಯಮಗಳನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ. ಒಂದು ವೇಳೆ ಈ ಮಸೂದೆ ಜಾರಿಗೆ ಬಂದರೆ ಬಿಸಿಸಿಐ ಸೇರಿದಂತೆ ಎಲ್ಲಾ ಕ್ರೀಡಾ ಸಂಸ್ಥೆಗಳು ಮಾಹಿತಿ ಹಕ್ಕು ವ್ಯಾಪ್ತಿಯಡಿ ಬರುತ್ತದೆ.

`ಈಗ ನೂತನವಾಗಿ ಸಿದ್ದಪಡಿಸಲಾಗಿರುವ ಮಸೂದೆಯ ಕರಡು ಪ್ರತಿಯನ್ನು ಕ್ರೀಡಾ ಸಂಸ್ಥೆಗಳಿಗೆ ಈಗಾಗಲೇ ಕಳುಹಿಸಲಾಗಿದೆ. ಸಂಸ್ಥೆಗಳ ಪ್ರತಿಕ್ರಿಯೆ ಪಡೆಯಲಾಗುತ್ತದೆ. ಈ ಸಂಸ್ಥೆಗಳು ಸರ್ಕಾರದ ಹಿಡಿತದಲ್ಲಿ ಇರಬೇಕು ಎನ್ನುವುದು ನಮ್ಮ ಉದ್ದೇಶವಲ್ಲ. ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಎನ್ನುವುದು ನಮ್ಮ ಗುರಿ~ ಎಂದು ಮಾಕನ್ ಹೇಳಿದರು.

ಹಾಕಿ ಇಂಡಿಯಾ ಹಾಗೂ ಭಾರತ ಹಾಕಿ ಫೆಡರೇಷನ್ಗಳ ವಿವಾದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಇದಕ್ಕಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಸಫಲವಾಗಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.