ಮಂಗಳವಾರ, ಮೇ 18, 2021
22 °C

ಬಿ.ಸಿ ಆಯೋಗಕ್ಕೆ ಅಧ್ಯಕ್ಷರ ನೇಮಕವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ಬಹುತೇಕ ನಿಷ್ಕ್ರಿಯವಾಗಿದ್ದು ಕೂಡಲೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಮನವಿ ಮಾಡಿದರು.  ವಿಜಯಿ ಭವಾನಿ ಕ್ಷೇಮಾಭಿವೃದ್ಧಿ ಸಂಘ ತನ್ನ ಬೆಳ್ಳಿಹಬ್ಬ ಮತ್ತು ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಅಂಗವಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.

`ರಾಜ್ಯದಲ್ಲಿ ಕ್ಷತ್ರೀಯ ಸಮುದಾಯದ ಜನಸಂಖ್ಯೆ 25- 30 ಲಕ್ಷದಷ್ಟಿದೆ.ಜಾತಿ ಗಣತಿ ಪೂರ್ಣಗೊಂಡ ನಂತರ ಸಮುದಾಯದ ಸಂಖ್ಯೆ ಎಷ್ಟಿದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ. ಆರ್ಥಿಕವಾಗಿ ಶೈಕ್ಷಣಿಕವಾಗಿ ಕ್ಷತ್ರೀಯ ಸಮಾಜ ಹಿಂದುಳಿದಿದೆ~ ಎಂದರು.`ಈ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಲು ಮುಂದಾಗಬೇಕಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಕ್ಷತ್ರೀಯರು ಹಿಂದುಳಿದ ವರ್ಗಗಳಿಗೆ ಸೇರಿದ್ದಾರೆ. ಆದರೆ ರಾಜ್ಯದಲ್ಲಿ ಇನ್ನೂ ಈ ಕಾರ್ಯ ನಡೆದಿಲ್ಲ. ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವುದರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯುತ್ತದೆ~ ಎಂದು ಅವರು ಅಭಿಪ್ರಾಯಪಟ್ಟರು.`ಶಿವಾಜಿ ಕಾಲದಿಂದಲೂ ಮರಾಠರು ಯೋಧರಾಗಿ ಮೆರೆದವರು. ಪಾಣಿಪತ್ ಕದನದಲ್ಲಿ, ಪ್ರಥಮ ಮತ್ತು ದ್ವಿತೀಯ ಮಹಾಯುದ್ಧದಲ್ಲಿ ಬಲಿದಾನ ಮಾಡಿದರು. ದೇಶಕ್ಕಾಗಿ ಟೊಂಕಕಟ್ಟಿ ನಿಂತ ಸಮುದಾಯ ಇದು~ ಎಂದರು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್, `ಶಿವಾಜಿ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡಬೇಕು. ಅವರ ಸಾಧನೆಯನ್ನು ಮುಂದಿನ ಪೀಳಿಗೆ ಕೂಡ ಸ್ಮರಿಸುವಂತಿದೆ ~ ಎಂದು ಸ್ಮರಿಸಿದರು.`ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶಭಕ್ತಿ ಮೆರೆದ ಮರಾಠರು ಪ್ರಸ್ತುತ ದೇಶದ ಈಶಾನ್ಯ ರಾಜ್ಯಗಳಲ್ಲಿ ಯೋಧರಾಗಿ  ಸಲ್ಲಿಸುತ್ತಿರುವ ಸೇವೆ ಮಹತ್ತರವಾದುದು.  ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಮಾಜಕ್ಕೆ ಅಗತ್ಯವಾದ ನೆರವು ನೀಡಲು ಸಿದ್ಧ~ ಎಂದರು.ಗೋಸಾಯಿ ಮಠದ ಸುರೇಶ್ವರಾನಂದ ಭಾರತಿ ಸ್ವಾಮೀಜಿ, ಸಮಾಜದ ಮುಖಂಡರಾದ ವಿ.ಎ.ರಾಣೋಜಿರಾವ್ ಸಾಠೆ, ಬಿ.ಆರ್.ಶ್ರೀನಿವಾಸ ಕಾಳೆ, ಆರ್.ಟಿ.ನಗರ ವೆಂಕಟೇಶ್ವರ ದೇವಸ್ಥಾನದ ಕಾರ್ಯದರ್ಶಿ ವಿಠ್ಠಲರಾವ್ ನಿಕ್ಕಂ ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.