ಬಿಸ್ಕತ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

7

ಬಿಸ್ಕತ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

Published:
Updated:
ಬಿಸ್ಕತ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

ರಾಜರಾಜೇಶ್ವರಿನಗರ :ಕುಂಬಳಗೋಡು ಬಳಿಯ `ವಿನ್‌ಪ್ಯಾಕ್ ಇಂಡಿಯಾ ಲಿಮಿಟೆಡ್' ಬಿಸ್ಕತ್ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.ಕಾರ್ಖಾನೆಯ ಮೊದಲನೇ ಮಹಡಿಯಲ್ಲಿನ ಹವಾನಿಯಂತ್ರಣ ಉಪಕರಣದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ಸ್ವಲ್ಪ ಸಮಯದಲ್ಲೇ ಬೆಂಕಿ ರಾಸಾಯನಿಕ ವಸ್ತುಗಳ ಗೋದಾಮಿಗೆ ವ್ಯಾಪಿಸಿ ಕಾರ್ಖಾನೆ ಹೊತ್ತಿ ಉರಿಯಲಾರಂಭಿಸಿದೆ. ಇದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಒಂಬತ್ತು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮೂರು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಆಗಿರುವ ನಷ್ಟದ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.`ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗೆ ಓಡಿ ಬಂದಿದ್ದರಿಂದ ಅವರಿಗೆ ಯಾವುದೇ ತೊಂದರೆಯಾಗಿಲ್ಲ' ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್ ಪಾಟೀಯ ಸುದ್ದಿಗಾರರಿಗೆ ತಿಳಿಸಿದರು. ಘಟನೆ ಸಂಬಂಧ ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry