ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧೆ

7

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧೆ

Published:
Updated:

ನವದೆಹಲಿ (ಪಿಟಿಐ): ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಗ್ಗಂಟಾಗಿದ್ದ ಎನ್‌ಡಿಎ ಮೈತ್ರಿಕೂಟದ ಸ್ಥಾನ ಹೊಂದಾಣಿಕೆ ಬಿಕ್ಕಟ್ಟು ಬಗೆ ಹರಿದಿದ್ದು ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬಿಹಾರ ರಾಜ್ಯ ಘಟಕದ ಮುಖಂಡರೊಂದಿಗೆ ಸಭೆ ನಡೆಸಿ ಸ್ಥಾನ ಹೊಂದಾಣಿಕೆ ಬಿಕ್ಕಟನ್ನು ಇತ್ಯರ್ಥಪಡಿಸಿದರು ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.ಒಟ್ಟು 243 ಸ್ಥಾನಗಳ ಪೈಕಿ ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಉಳಿದ 83 ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.ರಾಮ್‌ವಿಲಾಸ್‌ ಪಾಸ್ವಾನ್‌ ನೇತೃತ್ವದ  ಲೋಕಜನಶಕ್ತಿ ಪಕ್ಷಕ್ಕೆ 40 ಸ್ಥಾನಗಳು, ಉಪೇಂದ್ರ ಕುಶ್ವಾ ನೇತೃತ್ವದ ಆರ್‌ಎಲ್‌ಎಸ್‌ಪಿಗೆ 23 ಸ್ಥಾನಗಳು ಹಾಗೂ ಮಾಜಿ ಮುಖ್ಯಮಂತ್ರಿ ಮಾಂಝಿ ನೇತೃತ್ವದ ಎಚ್‌ಎಎಂ ಪಕ್ಷಕ್ಕೆ 20 ಸ್ಥಾನಗಳನ್ನು ಬಿಟ್ಟು ಕೊಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry