ಗುರುವಾರ , ಮೇ 19, 2022
20 °C

ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಸ್ಫೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ (ಪಿಟಿಐ): ಗಾಲಿಕುರ್ಚಿ ಮೇಲೆ ತೆರಳುತ್ತಿದ್ದ ವ್ಯಕ್ತಿಯ ಬಳಿ ಇದ್ದ ಸಿಡಿಮದ್ದುಗಳು ಸ್ಫೋಟಗೊಂಡು ಆತ ಗಾಯಗೊಂಡ ಘಟನೆ ಶನಿವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. `ನಿಲ್ದಾಣದ 3ನೇ ಟರ್ಮಿನಲ್ ಬಳಿ ಸ್ಫೋಟದ ಶಬ್ದ ಕೇಳಿ ಬಂದಿತ್ತು' ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.`ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಶಾನ್‌ಡಾಂಗ್ ಪ್ರಾಂತ್ಯದವನು' ಎಂದು ಗುರುತಿಸಲಾಗಿದೆ. ಈ  ವ್ಯಕ್ತಿ ಗನ್‌ಪೌಡರ್ ಸೇರಿ ಇತರ ಸ್ಫೋಟಕಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಸ್ಫೋಟ ಸಂಭವಿಸಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ಏನೆಂಬುದು ತಿಳಿದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.