ಭಾನುವಾರ, ಮೇ 16, 2021
22 °C

ಬೀಜ, ಗೊಬ್ಬರ: ಮುಂಜಾಗ್ರತೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿ: ತಾಲ್ಲೂಕಿನಲ್ಲಿ ಮುಂಗಾರಿ ಮಳೆ ಬರುವ ಭರವಸೆ ಮೂಡಿಸಿದೆ. ಅಲ್ಲಲ್ಲಿ ಮಳೆಯಾಗುತ್ತಿದೆ. ರೈತರಿಗೆ ಮುಂಗಾರಿ ಬಿತ್ತನೆಗೆ ಬೀಜ ಮತ್ತು ಗೊಬ್ಬರದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಆನಂದ ಹೊಟಗಾರ ಅಧಿಕಾರಿಗಳಿಗೆ ಸೂಚಿಸಿದರು.ಅವರು ಶುಕ್ರವಾರ ತಾಲ್ಲೂಕು ಪಂಚಾಯತಿ ಸಭಾ ಭವನದಲ್ಲಿ ಏರ್ಪಡಿಸಿದ್ದ 9ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ತಾಲ್ಲೂಕಿನ ಪ್ರತೀ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಶಿಕ್ಷಣದ ಗುಣಮಟ್ಟ ಪರೀಕ್ಷಿಸಬೇಕೆಂದು ಸದಸ್ಯೆ ಗೌರಮ್ಮ ಮುಳಜಿ ಒತ್ತಾಯಿಸಿದರು.ಹೋರ್ತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಬಾಲಕಿಯರ ಶಾಲೆಗಳ ಮುಖ್ಯಗುರುಗಳನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಸದಸ್ಯ ರಾಜೇಂದ್ರ ಬೊಮ್ಮನಳ್ಳಿ ಮಾತನಾಡಿ ಹೋರ್ತಿ ಶಾಲೆಗಳ ಮುಖ್ಯ ಗುರುಗಳನ್ನು ವರ್ಗಾವಣೆ ಮಾಡಬೇಕು.

ಕಳೆದ ಸಾಮಾನ್ಯ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಜಿಲ್ಲಾ ಪಂಚಾಯತಿಗೆ ಪತ್ರ ಬರೆಯಬೇಕೆಂದು ಒತ್ತಾಯ ಮಾಡಿದರು. ವೇದಿಕೆಯಲ್ಲಿ ಆನಂದ ಹೊಟಗಾರ, ಜಿಲ್ಲಾ ಪಂಚಾಯತಿ ಸದಸ್ಯ ಗುರನಗೌಡ ಪಾಟೀಲ, ಇಓ ಜಯರಾಮ ಚವ್ಹಾಣ, ಯೋಜನಾಧಿಕಾರಿ ಸಿ.ಬಿ.ಕುಂಬಾರ ಇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.