ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಆಗ್ರಹ

7

ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಆಗ್ರಹ

Published:
Updated:

ಕೆ.ಆರ್.ನಗರ: ತಾಲ್ಲೂಕಿನ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಿಸುವಂತೆ ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಎಂ.ಎಸ್.ನಟರಾಜು ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಅಧಿಕಾರಿಗಳು ವ್ಯವಸಾಯ ಸೇವಾ ಕೇಂದ್ರಗಳಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸ ಗೊಬ್ಬರ ವಿತರಣೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಗರುಡಗಂಬ ಸ್ವಾಮಿ ಮಾತನಾಡಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಬೆಳೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.

ತಾಲ್ಲೂಕು ರೈತ ಸಂಘ ಮಹಿಳಾ ಘಟಕದ ಅಧ್ಯಕ್ಷರಾಗಿ ಅರ್ಜುನಹಳ್ಳಿ ತ್ರಿಪುರಾಂಬ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಯಿತು.

ಸಂಘದ ಉಪಾಧ್ಯಕ್ಷ ಅರ್ಜುನಹಳ್ಳಿ ಬಸಪ್ಪ, ಪ್ರಧಾನ ಕಾರ್ಯದರ್ಶಿ ಕೆಸ್ತೂರುಕೊಪ್ಪಲು ಹೊಂಬಾಳೇಗೌಡ, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅರ್ಜುನಹಳ್ಳಿ ರಾಮಪ್ರಸಾದ್, ಎಂ.ಜೆ.ಮಲ್ಲೇಶ್, ಎ.ಡಿ.ಮಂಜುನಾಥ್, ಕಾಂತರಾಜ್, ಶಿವಶಂಕರ್, ದಯಾನಂದ, ಎಂ.ಕೆ.ಮಂಜುನಾಥ್ ಮೊದಲಾದವರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry