ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಅಭಿವೃದ್ಧಿ: ಸಿಎಂಗೆ ಧರಂ ಸವಾಲು

Last Updated 21 ಡಿಸೆಂಬರ್ 2010, 9:35 IST
ಅಕ್ಷರ ಗಾತ್ರ

ಔರಾದ್: ನಾನು ಮುಖ್ಯಮಂತ್ರಿ ಯಾಗಿದ್ದಾಗ ಬೀದರ್ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ಅವರು
ಮುಖ್ಯಮಂತ್ರಿಯಾಗಿ ಕಳೆದ ಮೂರು ವರ್ಷಗಳಲ್ಲಿ ಈ ಜಿಲ್ಲೆಗೆ ಏನು ಮಾಡಿದ್ದಾರೆ ಎಂಬುದನ್ನು ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಂಸದ ಎನ್. ಧರ್ಮಸಿಂಗ್ ಸವಾಲು ಹಾಕಿದ್ದಾರೆ.

ತಾಲ್ಲೂಕಿನ ವಡಗಾಂವ್‌ನಲ್ಲಿ ಸೋಮವಾರ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.  ಮೆಡಿಕಲ್ ಕಾಲೇಜು, ಪಶು ವಿಶ್ವವಿದ್ಯಾಲಯ, ಬೀದರ್ ಶ್ರೀರಂಗ ಪಟ್ಟಣ ರಾಷ್ಟ್ರೀಯ ಹೆದ್ದಾರಿ ನನ್ನ ಕಾಲದಲ್ಲಿ ಆಗಿವೆ. ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ, ಬಸವ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ್ದು ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು. ಮಾಜಿ ಶಾಸಕ ಗುಂಡಪ್ಪ ವಕೀಲ, ಧುರೀಣ ಅರುಣ ಪಾಟೀಲ ಮಾತನಾಡಿದರು. ವಡಗಾಂವ್ ಅಭ್ಯರ್ಥಿ ಬಸವರಾಜ ದೇಶಮುಖ, ಜನಸೇವೆಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡರು.

ನಂತರ ಚಿಂತಾಕಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿಯ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ ಹಿಪ್ಪಳ ಗಾಂವ್ ಪರವಾಗಿ ಮತ ಯಾಚಿಸಿ ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ, ಧುರೀಣರಾದ ಮುರಳೀಧರ ಎಕ ಲಾರಕರ್, ಅರವಿಂದ ಅರಳಿ, ಡಾ. ಲಕ್ಷ್ಮಣ ಸೋರಳಿ, ಶಿವರಾಜ ದೇಶ ಮುಖ ಉಪಸ್ಥಿತರಿದ್ದರು. ಕಾರ್ಯ ದರ್ಶಿ ಚನ್ನಪ್ಪ ಉಪ್ಪೆ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT