ಬೀದರ್: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರ ಆಯ್ಕೆ

7

ಬೀದರ್: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರ ಆಯ್ಕೆ

Published:
Updated:

ಬೀದರ್: ನಗರದಲ್ಲಿ ಬುಧವಾರ ತೆರೆದ ವಾಹನದಲ್ಲಿ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷೆ ದೀಪಿಕಾ ಸಚೀನ್ ರಾಠೋಡ್ ಮತ್ತು ಉಪಾಧ್ಯಕ್ಷೆ ಲತಾ ಶಾಂತಕುಮಾರ್ ಹಾರಕೂಡೆ ಅವರ ಭವ್ಯ ಮೆರವಣಿಗೆ ನಡೆಯಿತು.ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಲಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದರು. ಕೈಯಲ್ಲಿ ಗುಲಾಲು, ಹೂಮಾಲೆ ಹಿಡಿದು ಫಲಿತಾಂಶಕ್ಕಾಗಿ ಕಾತರರಾಗಿದ್ದರು.ದೀಪಿಕಾ ರಾಠೋಡ್ ಅಧ್ಯಕ್ಷ ಮತ್ತು ಲತಾ ಹಾರಕೂಡೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸುತ್ತಲೇ ಕಿವಿಗಡಚಿಕ್ಕುವಂತೆ ಪಟಾಕಿ ಸಿಡಿಸಿದರು. ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಗುಲಾಲು ಎರಚಿ ಸಂತಸ ವ್ಯಕ್ತಪಡಿಸಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಿಂದ ಹೊರ ಬಂದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅಭಿಮಾನಿಗಳತ್ತ ಗೆಲುವಿನ ಸಂಕೇತ ತೋರಿಸಿದರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷದ ಪ್ರಮುಖರು ಸೇರಿದಂತೆ ಅನೇಕರು ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.ನಂತರ ಬೆಂಬಲಿಗರು ಜಿಲ್ಲಾ ಪಂಚಾಯಿತಿ ಕಚೇರಿಯ ಹೊರಗಡೆ ಮೆರವಣಿಗೆಗಾಗಿ ತೆರೆದ ವಾಹನವನ್ನು ಸಿದ್ಧಪಡಿಸಿದರು. ಬ್ಯಾಂಡ್ ಬಾಜಾ ತಂಡವನ್ನೂ ಕರೆತಂದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರು ವಾಹನ ಹತ್ತಿದರು. ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ತೆರೆದ ವಾಹನದಲ್ಲಿ ಪಕ್ಷದ ಮುಖಂಡರು, ಗಣ್ಯರು ಇದ್ದರು.

ಶಾಸಕ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry