ಬೀದರ್: ಬ್ಯಾಂಕ್ ನೌಕರರ ಪ್ರತಿಭಟನೆ

7

ಬೀದರ್: ಬ್ಯಾಂಕ್ ನೌಕರರ ಪ್ರತಿಭಟನೆ

Published:
Updated:
ಬೀದರ್: ಬ್ಯಾಂಕ್ ನೌಕರರ ಪ್ರತಿಭಟನೆ

 


ಬೀದರ್: ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಬ್ಯಾಂಕ್ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ದೇಶವ್ಯಾಪಿ ಮುಷ್ಕರದ ಕರೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬ್ಯಾಂಕ್‌ಗಳು ಬಂದ್ ಆಗಿದ್ದವು. ಹೀಗಾಗಿ ಗ್ರಾಹಕರು ಪರದಾಡುವಂತಾಯಿತು. ನಗರದ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಎದುರು ಸೇರಿದ ಬ್ಯಾಂಕ್ ನೌಕರರು ಘೋಷಣೆಗಳನ್ನು ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶದ ಖಾಸಗಿ ಬ್ಯಾಂಕ್‌ಗಳು ಬಹುರಾಷ್ಟ್ರೀಯ ಬ್ಯಾಂಕ್‌ಗಳ ಪಾಲಾಗಲಿವೆ.  ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಸಗಿ ಹಾಗೂ ವಿದೇಶಿ ಹೂಡಿಕೆ ಹೆಚ್ಚಾಗಲಿದೆ. ಬ್ಯಾಂಕ್‌ಗಳ ವಿಲೀನ, ಸ್ವಾಧೀನ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆ, ಹೊಸ ಬ್ಯಾಂಕ್‌ಗಳಿಗೆ ಪರವಾನಿಗೆ ನೀಡಲು ಈ ತಿದ್ದುಪಡಿ ಅವಕಾಶ ಮಾಡಿಕೊಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಸಿದ್ರಾಮ್ ಸೀತಾ, ಸಂಘಟನಾ ಕಾರ್ಯದರ್ಶಿ ಶಿವಾಜಿರಾವ್ ಮಾನೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry