ಮಂಗಳವಾರ, ಏಪ್ರಿಲ್ 20, 2021
32 °C

ಬೀದರ್: 11 ಡೆಂಗೆ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 11 ಡೆಂಗೆ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್ ತಿಳಿಸಿದರು. ಡೆಂಗೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.ಕಳೆದ ವರ್ಷದಲ್ಲಿ ಒಟ್ಟಾರೆ 22 ಪ್ರಕರಣಗಳು ವರದಿಯಾಗಿದ್ದು, ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಡೆಂಗೆ, ಚಿಕುನ್‌ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾಂಕ್ರಾಮಿಕ ರೋಗಗಳ ಬಗೆಗೆ ಜನಜಾಗೃತಿ ಮೂಡಿಸಬೇಕು. ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು  ಎಂದು ಸೂಚಿಸಿದರು.ಖಾಲಿ ನಿವೇಶನ, ರಸ್ತೆಯ ಅಕ್ಕಪಕ್ಕದಲ್ಲಿ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಕಸದ ವಿಲೇವಾರಿಯನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು. ಚರಂಡಿಗಳನ್ನು ಶುಚಿಗೊಳಿಸಬೇಕು. ನೀರು ಪೂರೈಕೆಯಾಗುವ ಪೈಪ್‌ಗಳಲ್ಲಿ ಸೋರಿಕೆ ಇಲ್ಲದೇ ಇರುವುದನ್ನು ಖಚಿತಪಡಿಸಬೇಕು ಎಂದು ತಾಕೀತು ಮಾಡಿದರು.ಖಚಿತತೆಗೆ ಸೂಚನೆ:
ಡೆಂಗೆ ಬಗೆಗೆ ಆರೋಗ್ಯ ಅಧಿಕಾರಿಗಳು ಭೀತಿ ಸೃಷ್ಟಿಸುವ ಹೇಳಿಕೆಗಳನ್ನು ನೀಡಬಾರದು. ಮೊದಲು ರೋಗವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಜಿಲ್ಲೆಯಲ್ಲಿ ಈ ವರ್ಷ ಡೆಂಗೆ, ಚಿಕುನ್‌ಗುನ್ಯ ರೋಗಿಗಳ ಪ್ರಮಾಣ ಕಡಿಮೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಾಬುರಾವ್ ಬೆಲ್ಲದ್ ತಿಳಿಸಿದರು. ಪಟ್ಟಣ ಪ್ರದೇಶಗಳಲ್ಲಿ ರಸ್ತೆ, ಹೊಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕಸ ವಿಲೇವಾರಿ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಸಹಿಸಲಾಗದು ಎಂದು ಎಚ್ಚರಿಸಿದರು.ನಗರಸಭೆ ವತಿಯಿಂದ ನಗರದ ವಿವಿಧೆಡೆ ಕಸದ ತೊಟ್ಟಿಗಳನ್ನು ಇಡಲಾಗಿದೆ. ಆದರೆ, ಸಾರ್ವಜನಿಕರು ಇವುಗಳಲ್ಲಿ ಕಸ ಹಾಕುತ್ತಿಲ್ಲ ಎಂದು ನಗರಸಭೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, `ಜನ ಎಲ್ಲಿ ಕಸ ಬೀಸಾಡುತ್ತಾರೋ ಅಲ್ಲಿ ತೊಟ್ಟಿಗಳನ್ನಿಡಿ~ ಎಂದು ಸೂಚನೆ ನೀಡಿದರು.ಸ್ವಸಹಾಯ ಗುಂಪುಗಳ ಮೂಲಕವೇ ನಗರದಲ್ಲಿ ಮನೆ ಮನೆ ಕಸ ಸಂಗ್ರಹ ಕೈಗೊಳ್ಳಬೇಕು ಎಂದರು.  ಶಾಸಕ ರಹೀಮ್‌ಖಾನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೀತಾಂಜಲಿ ಉಪಸ್ಥಿತರಿದ್ದರು. ಜಿಲ್ಲೆಯ ಸ್ಥಳೀಯ ಸಂಸ್ಥೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.