ಶುಕ್ರವಾರ, ಮೇ 7, 2021
26 °C

ಬೀದಿದೀಪಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ವೆಂಕಟೇಶ್ವರ ಬಡಾವಣೆಯ ಕೊಳಚೆ ಪ್ರದೇಶದಲ್ಲಿ ಬೀದಿದೀಪಗಳ ಸಂಪರ್ಕ ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ನಿವಾಸಿಗಳು ಗುರುವಾರ ನಗರದ ಹೊರವಲಯದ ಚಳ್ಳಕೆರೆ ರಸ್ತೆಯಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.32ನೇ ವಾರ್ಡ್‌ನಲ್ಲಿ ಸುಮಾರು ಒಂದು ವರ್ಷ ಹಿಂದೆ ಬೀದಿದೀಪಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಬೆಸ್ಕಾಂ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.ಕೊಳೆಗೇರಿ ಪ್ರದೇಶಗಳಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಹಾವು, ಚೇಳು ಇತರೆ ವಿಷಜಂತುಗಳ ಉಪಟಳದಿಂದ ಮಕ್ಕಳು, ವಯೋವೃದ್ಧರು ಭಯದ ವಾತಾವರಣದಲ್ಲಿ ಬದುಕು ಸಾಗಿಸುವಂತಾಗಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಬದುಕು ಸಾಗಿಸುತ್ತಿದ್ದು, ಅಗತ್ಯ ಮೂಲಸೌಲಭ್ಯಗಳು ಇಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು.ಅಧಿಕಾರಿಗಳು ಕಡಿತಗೊಳಿಸಿರುವ ಬೀದಿದೀಪಗಳ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಕೊಳೆಗೇರಿ ನಿವಾಸಿಗಳು ನೆಮ್ಮದಿ ಬದುಕು ಸಾಗಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.ಬಡಾವಣೆಯಲ್ಲಿ ಸಮರ್ಪಕ ರಸ್ತೆ, ಚರಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ನಾಗರಿಕರು ಬದುಕು ಸಾಗಿಸುವುದೇ ದುಸ್ತರವಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೇವಲ ಆಶ್ವಾಸನೆ ನೀಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ ಎಂದು ದೂರಿದರು.ನಂತರ ಬೀದಿದೀಪಗಳಿಗೆ ಸಂಪರ್ಕ ಕಲ್ಪಿಸಲು ಸೂಚಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್, ಜೆ. ಮಂಜುನಾಥ್, ಎನ್. ರಂಗಸ್ವಾಮಿ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.