ಬುಧವಾರ, ಮೇ 12, 2021
26 °C

ಬೀದಿನಾಯಿ: ವಿಚಾರಣೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜನರಿಗೆ ತೊಂದರೆ ಕೊಡುವ ಬೀದಿ ನಾಯಿಗಳನ್ನು ಪಾಲಿಕೆ ಅಧಿಕಾರಿಗಳು ನಿರ್ಮೂಲನೆ ಮಾಡಬೇಕೇ, ಬೇಡವೇ ಎನ್ನುವುದರ ಬಗೆಗಿನ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್‌ಗೆ ಮುಂದೂಡಿದೆ.ಜನರಿಗೆ ತೊಂದರೆ ಕೊಡುತ್ತಿದ್ದ ಬೀದಿ ನಾಯಿಗ ಳನ್ನು ನಿರ್ಮೂಲನೆ ಮಾಡಲು ಮುಂಬೈ ನಗರ ಪಾಲಿಕೆಗೆ ಅನುಮತಿ ನೀಡಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ 2009ರ ಜ. 23ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.ಆದರೆ  `ಬೀದಿ ನಾಯಿಗಳ ಹಾವಳಿ~ ಎನ್ನುವ ಪದದ ಸ್ಪಷ್ಟ ಅರ್ಥ ನೀಡುವವರೆಗೆ ಹೈಕೋರ್ಟ್ ಆದೇಶ ಜಾರಿಗೊಳಿಸಬಾರದು ಎಂದು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ  ಕೋರಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.