ಬುಧವಾರ, ಮೇ 18, 2022
25 °C

ಬೀದಿ ಅಂಗಡಿಗಳ ಸ್ಥಳಾಂತರ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಿಂಗಸುಗೂರ: ಕಳೆದ ಎರಡು ವರ್ಷಗಳಿಂದ ಪಟ್ಟಣದ ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಕ್ರಮ ಕಟ್ಟಡಗಳ ಸ್ಥಳಾಂತರ ಕಾರ್ಯಾಚರಣೆ ನಿರಂತರವಾಗಿ ನಡೆದುಕೊಂಡು ಬಂದಿದೆ. ಭಾನುವಾರ ಪ್ರಮುಖ ರಸ್ತೆಗಳನ್ನು ಅಕ್ರಮಿಸಿಕೊಂಡಿದ್ದ ಸಣ್ಣ ಪುಟ್ಟ ಅಂಗಡಿಗಳ ಸ್ಥಳಾಂತರ ಕಾರ್ಯಾಚರಣೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದರ ಸಾರಥ್ಯದಲ್ಲಿ ಬಿರುಸಿನಿಂದ ಜರುಗಿತು.ಕಳೆದ ಎರಡು ವರ್ಷಗಳ ಅವಧಿಯಲ್ಲಿ ಅಗಲೀಕರಣದ ಹೆಸರಿನಲ್ಲಿ ಏಳೆಂಟು ಬಾರಿ ಸಣ್ಣ ಪುಟ್ಟ ಅಂಗಡಿಗಳನ್ನೆ ತೆರವುಗೊಳಿಸುತ್ತ ಬರಲಾಗುತ್ತಿದೆ. ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಪ್ರತಿಷ್ಠಿತರ ಕಟ್ಟಡಗಳ ಸ್ಥಳಾಂತರ ಕೆಲಸಕ್ಕೆ ಮುಂದಗದ ಪುರಸಭೆ ಮತ್ತು ತಾಲ್ಲೂಕು ಆಡಳಿತದ ತಾರತಮ್ಯ ನೀತಿ ಬಗ್ಗೆ ವ್ಯಾಪಕ ಆಕ್ರೋಶಗಳು ಕೇಳಿಬಂದವು.ಈ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಸಧ್ಯದಲ್ಲಿ ಸಣ್ಣ ಪುಟ್ಟ ಅಂಗಡಿಗಳ ಸ್ಥಳಾಂತರ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ನಿಯಮಾನುಸಾರ ರಸ್ತೆ ಅತಿಕ್ರಮಿಸಿಕೊಂಡ ಕಟ್ಟಡಗಳನ್ನು ನೆಲಸಮಗೊಳಿಸುವುದು ನಿಶ್ಚಿತವಾಗಿದೆ. ಕಾನೂನಿನ ಮುಂದೆ ದೊಡ್ಡವರು, ಸಣ್ಣವರು ಎಂಬ ತಾರತಮ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.