ಗುರುವಾರ , ಏಪ್ರಿಲ್ 15, 2021
23 °C

ಬೀಸಿತು ನೀತಿ ಸಂಹಿತೆಯ ಚಾಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯಗಳ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ ನೀತಿ ಸಂಹಿತೆ ಉಲ್ಲಂಘನೆಗೆ ಯಾವುದೇ ಅವಕಾಶ ನೀಡದಂತೆ ಎಲ್ಲಾ ಪಕ್ಷಗಳಿಗೆ ನಿರ್ದೇಶನ ನೀಡಿದೆ.ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಯಾವುದೇ ಜಾಹಿರಾತು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರದರ್ಶನವಾಗಬಾರದು ಎಂದು ಅದು ಎಚ್ಚರಿಸಿದೆ.ಇಂತಹ ಜಾಹಿರಾತನ್ನು ಈಗಾಗಲೇ ಬಿಡುಗಡೆ ಮಾಡಿದ್ದರೆ ಅದರ ಪ್ರಸಾರವನ್ನು ಮತ್ತು ಪ್ರಕಟಣೆಯನ್ನು ತಕ್ಷಣವೇ ಕೈಬಿಡಬೇಕು. ಈ ಸೂಚನೆಗಳು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ನಿಗಾವಹಿಸಲು ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೆರಿಗಳ ಮುಖ್ಯಕಾರ್ಯದರ್ಶಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕೇಂದ್ರ ಸಚಿವಾಲಯದ ಕಾರ್ಯದರ್ಶಿಗಳಿಗೆ  ಆಯೋಗ ಆದೇಶಿಸಿದೆ.ಸಚಿವರು ಚುನಾವಣಾ ಪ್ರಚಾರ ಕಾರ್ಯದ ಸಲುವಾಗಿ ಅಧಿಕೃತ ಭೇಟಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಅಲ್ಲದೆ ಪ್ರಚಾರಕ್ಕಾಗಿ ಆಡಳಿತ ಯಂತ್ರವನ್ನು ಬಳಸಿಕೊಳ್ಳುವಂತಿಲ್ಲ. ಆಡಳಿತದಲ್ಲಿರುವ ಪಕ್ಷ ಸ್ವಂತ ಉದ್ದೇಶಕ್ಕೆ ಸರ್ಕಾರಿ ವಾಹನಗಳನ್ನು ಉಪಯೋಗಿಸಕೂಡದು ಎಂದು ತಿಳಿಸಿದೆ. ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿನ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಸಂಸದರ ಅಭಿವೃದ್ಧಿ ನಿಧಿಗೆ ಹಣ ಬಿಡುಗಡೆ ಮಾಡಬಾರದೆಂದು ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.