ಶುಕ್ರವಾರ, ಜೂನ್ 18, 2021
26 °C

ಬುದ್ಧಿಮಾಂದ್ಯ ಮಕ್ಕಳಿಗೆ ಸಾಂಸ್ಕೃತಿಕ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬುದ್ಧಿಮಾಂದ್ಯ ಮಕ್ಕಳಿಗೆ ಸಾಂಸ್ಕೃತಿಕ ತರಬೇತಿ

ಗುಲ್ಬರ್ಗ: ನೋಬೆಲ್ ಪ್ರಶಸ್ತಿ ಪುರಸ್ಕೃತ ಕವಿ ರವೀಂದ್ರನಾಥ ಟ್ಯಾಗೋರ್ ಅವರ 150ನೇ ಜನ್ಮ ದಿನ ಆಚರಣೆ ಅಂಗವಾಗಿ ಮಾ. 1ರಿಂದ 3ರವರೆಗೆ ಮೂರು ದಿನಗಳ ಕಾಲ ನಗರದ ಡಾ. ಸಿದ್ದಯ್ಯ ಪುರಾಣಿಕ ಸಾಂಸ್ಕೃತಿಕ ಸಮುಚ್ಛಯದಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಿ (12 ರಿಂದ 20 ವರ್ಷದೊಳಗಿನ) ವಿವಿಧ ಸಾಂಸ್ಕೃತಿಕ ಕಲೆಗಳ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಆದಿವಾಸಿ ಮಕ್ಕಳ ಕಲೆ, ಪರಂಪರೆಯ ಪ್ರದರ್ಶನ ಮತ್ತು ಉದಯೋನ್ಮುಖ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ತರಬೇತಿಯಲ್ಲಿ ಕರ್ನಾಟಕ, ಛತ್ತೀಸ್‌ಗಡ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳ 100 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಪೇಂಟಿಂಗ್, ಕರಕುಶಲ ಕಲೆ, ಕ್ಲೆ ಮಾಡೆಲಿಂಗ್, ನಾಟಕ, ನೃತ್ಯ, ಸಮೂಹ ಗೀತೆಗಳ ಬಗ್ಗೆ ತರಬೇತಿ ನೀಡಲಾಯಿತು. ಪ್ರತಿ ರಾಜ್ಯದಿಂದ 20 ವಿದ್ಯಾರ್ಥಿಗಳು ಸೇರಿದಂತೆ, 15 ಜನ ಶಿಕ್ಷಕರು, 12 ಜನ ತರಬೇತುದಾರರು ಭಾಗವಹಿಸಿದ್ದರು.ತರಬೇತಿಯಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳ ಪ್ರಯಾಣ ಭತ್ಯೆ, ಊಟ, ವಸತಿಯ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ರಾಜ್ಯಗಳ 12 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳಿಗೆ ದಿನಾಲು ಬೆಳಿಗ್ಗೆ ಯೋಗ, ಪ್ರಾಣಾಯಾಮ ಕೂಡ ಕಲಿಸಲಾಯಿತು ಎಂದು ನಾಗಪುರದ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ಕಾರ್ಯಕ್ರಮ ಅಧಿಕಾರಿ ಗೋಪಾಲ ಬೆಟವಾರ್  ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.