ಸೋಮವಾರ, ಮೇ 23, 2022
27 °C

ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಶಂಕುಸ್ಥಾಪನೆ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: `ಸಮಾಜಸೇವೆ ವೃತ್ತಿಯಾಗದೆ ಹವ್ಯಾಸವಾಗಬೇಕು. ಬದುಕು ಸಾರ್ಥಕವಾಗಲು ನಿಸ್ವಾರ್ಥ ಸೇವೆಯನ್ನು ಸಲ್ಲಿಸಬೇಕು' ಎಂದು ಗಾಂಧಿ ಸ್ಮಾರಕ ನಿಧಿಯ ಕಾರ್ಯದರ್ಶಿ ಪ್ರೊ.ಬಿ.ಜಿ.ಶಿವರಾಜು ಸಲಹೆ ನೀಡಿದರು.ಇಲ್ಲಿಗೆ ಸಮೀಪದ ಕರೆಕಲ್ ಕ್ರಾಸ್ ಬಳಿ ದಿವ್ಯಜ್ಯೋತಿ ವಿದ್ಯಾಕೇಂದ್ರ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವೃದ್ಧಾಶ್ರಮ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಹಿರಿಯ ಕಲಾವಿದ ಡಾ.ಸಿ.ಚಂದ್ರಶೇಖರ್, `ಬದುಕು ಸ್ಥಾವರವಾಗದೆ ಜಂಗಮವಾಗಬೇಕು. ಆಶ್ರಮವು ಸಾಂಸ್ಕೃತಿಕ ಕೇಂದ್ರವಾಗಲಿ' ಎಂದರು.

ಬ್ರಾಡ್‌ಕ್ಯಾಸ್ಟ್ ಕನ್ಸಲ್ಟೆಂಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ನರಸಿಂಹಸ್ವಾಮಿ, ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಎಂ.ಎಲ್ ಕಾಂತರಾಜು, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣ್, ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಸೋಮಶೇಖರ್, ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಉಪಸ್ಥಿತರಿದ್ದರು.ಪ್ರತಿಭಾ ಪುರಸ್ಕಾರ: ಸ್ಥಳೀಯ ತಾಲ್ಲೂಕು ಒಕ್ಕಲಿಗ ಸರ್ಕಾರಿ ನೌಕರರ ಸಂಘವು 2012-13ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.ಅರ್ಹರು ಜುಲೈ 20ರೊಳಗಾಗಿ ಅಂಕ ಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9448713156.

ಅರ್ಜಿ ಆಹ್ವಾನ: ಸ್ಥಳೀಯ ತಾಲ್ಲೂಕು ವೀರಶೈವ ಮಹಸಭಾ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2012-13ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಜುಲೈ 15ರೊಳಗೆ ಅಂಕ ಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ: 9342558455.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.