ಕೆ.ಆರ್.ಪೇಟೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರಾದ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿದ್ದ ಕಾಮಗಾರಿಗಳಿಗೆ ಗ್ರಹಣ ಹಿಡಿದಿದ್ದು, ಯೋಜನೆಯ ಅನುಷ್ಠಾನಕ್ಕೆ ಹಲವು ಅಡೆ ತಡೆಗಳು ಎದುರಾಗಿವೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೂಕನಕೆರೆ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಲು ಸೂಚಿಸಿದ್ದರು. ಸಾರ್ವಜನಿಕ ಉದ್ಯಾನ, ಬಸ್ ನಿಲ್ದಾಣ, ಮಾರುಕಟ್ಟೆ ಸಂಕೀರ್ಣ ಹಾಗೂ ಸರ್ಕಾರಿ ಕಚೇರಿಗಳಿಗೆ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು.
ಕಟ್ಟಡ ನಿರ್ಮಾಣಕ್ಕಾಗಿ ಅನುಪಯುಕ್ತವಾಗಿದ್ದ ದೊಡ್ಡ ಕೆರೆಯ ಹಿಂಭಾಗದಲ್ಲಿ ಬಸ್ ನಿಲ್ದಾಣದ ಸಮೀಪವಿರುವ ಅಂದಾಜು 7.30 ಗುಂಟೆ ವಿಸ್ತೀರ್ಣದ ದೊಡ್ಡ ಹೊಂಡವನ್ನು ಮುಚ್ಚಿಸಿ, ಬಳಸಿಕೊಳ್ಳಲು ತೀರ್ಮಾನಿಸಲಾಗಿತ್ತು.

ಹೊಂಡ ಮುಚ್ಚಿಸುವ ಕೆಲಸವನ್ನು ಅಂದಾಜು ₹ 75 ಲಕ್ಷ ವೆಚ್ಚದಲ್ಲಿ ಮಾಡಲಾಗಿದೆ. ನೀರಾವರಿ ಇಲಾಖೆ ವಶದಲ್ಲಿರುವ ಜಾಗವೂ ಕಂದಾಯ ಇಲಾಖೆಗೆ ವರ್ಗಾವಣೆಯಾಗಬೇಕಿತ್ತು. ಆದರೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಜಾಗ ಹಸ್ತಾಂತರ ಕಾರ್ಯ ಆಮೆಗತಿ ವೇಗ ಪಡೆದುಕೊಂಡಿದೆ.

ಮಾದರಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಶಂಕುಸ್ಥಾಪನೆ ಮಾಡಿರುವ ಜಾಗದಲ್ಲಿ 20ಕ್ಕೂ ಹೆಚ್ಚು ವಿವಿಧ ಇಲಾಖೆಗಳ ಕಚೇರಿ
ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಭೂಮಿ ಹಸ್ತಾಂತರಿಸುವ ಕಾರ್ಯ ಆಮೆಗತಿಯಲ್ಲಿ ನಡೆದಿರುವುದರಿಂದ ಉಳಿದ ಕಾಮಗಾರಿಗಳಿಗೂ ತಡೆ ಉಂಟಾಗಿದೆ.

ಜಾಗ ಕೆರೆಗೆ ಸೇರಿದ್ದರಿಂದ ಸಾರ್ವಜನಿಕ ಉಪಯೋಗಕ್ಕೆ ಡಿನೋಟಿಫಿಕೇಶನ್ ಮಾಡಬೇಕು ಎಂದು ಕಂದಾಯ ಇಲಾಖೆ ಹೇಳಿತ್ತು. ಇದೊಂದು ಅನುಪಯುಕ್ತ ಜಾಗ ಆಗಿರುವುದರಿಂದ ಡಿನೋಟಿಫಿಕೇಶನ್ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಆಗಿನ ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜು ವರದಿ ಕಳುಹಿಸಿದ್ದರು.

ವರದಿ ಸಲ್ಲಿಸಿ ಎರಡು ವರ್ಷವಾಗಿದ್ದು, ಅದನ್ನು ಸರ್ಕಾರಕ್ಕೆ ಕಳುಹಿಸಿದೇ ಜಿಲ್ಲಾಡಳಿತ ತನ್ನ ಬಳಿಯೇ ಇಟ್ಟುಕೊಂಡಿದೆ ಎಂದು ಆರೋಪಿಸುತ್ತಾರೆ ತಾ.ಪಂ. ಮಾಜಿ ಅಧ್ಯಕ್ಷ ಬಿ.ಜವರಾಯಿಗೌಡ.

‘ಭೂಮಿ ಬಳಕೆಗೆ ಅನುಮತಿ ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೂಡಲೇ ಚಾಲನೆ ನೀಡಬೇಕು’ ಎಂದು ಆಗ್ರಹಿಸುತ್ತಾರೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಧುಸೂಧನ್.
- ಬಲ್ಲೇನಹಳ್ಳಿ ಮಂಜುನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.