ಶುಕ್ರವಾರ, ಮೇ 20, 2022
19 °C

ಬೃಹತ್ ಪ್ರಮಾಣದ ಸ್ಫೋಟಕ ಸಾಮಗ್ರಿ ವಶ, ಒಬ್ಬನ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್ (ಐಎಎನ್‌ಎಸ್): ಮಧ್ಯಪ್ರದೇಶದ ರೇವಾ ಜಿಲ್ಲೆಯ ಮನೆಯಲ್ಲಿದ್ದ ಮತ್ತು ಕಾರೊಂದರಲ್ಲಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.`ರೇವಾ ಜಿಲ್ಲೆಯ ರಾಜೇಶ್ ಪಟೇಲ್ ಮನೆಯಲ್ಲಿ 10 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಐದು ಸಾವಿರ ಡಿಟೊನೇಟರ್‌ಗಳನ್ನು ವಶಪಡಿಕೊಳ್ಳಲಾಗಿದೆ. ಹಾಗೆಯೇ ಕಾರ್‌ನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆ ಕಾರನ್ನು ಬೆನ್ನಟ್ಟಿ ಹೋಗಿ ಸ್ಫೋಟಕ ಸಾಮಗ್ರಿಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ. ಆರೋಪಿ ರಾಜೇಶ್ ಪಟೇಲ್ ತಲೆತಪ್ಪಿಸಿಕೊಂಡಿದ್ದಾನೆ~ ಎಂದು ಡಿಐಜಿ ಕೆ.ಪಿ. ಖರೆ ತಿಳಿಸಿದ್ದಾರೆ.ಹರಿಯಾಣದ ಅಂಬಾಲದಲ್ಲಿ ನಾಲ್ಕು ದಿನಗಳ ಹಿಂದೆ 5 ಕೆ.ಜಿಗೂ ಹೆಚ್ಚು ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣದ ಬೆನ್ನಹಿಂದೆಯೇ ಮಧ್ಯಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.