ಗುರುವಾರ , ಏಪ್ರಿಲ್ 22, 2021
28 °C

ಬೆಂಕಿ ಆಕಸ್ಮಿಕ: ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾನಮತ್ತನಾಗಿ ಮಲಗಿದ್ದ ವ್ಯಕ್ತಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಜೀವ ದಹನವಾಗಿರುವ ಘಟನೆ ಇಟ್ಟಮಡುವಿನಲ್ಲಿ ಬುಧವಾರ ನಸುಕಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಆನಂದ್ (40) ಮೃತಪಟ್ಟವರು. ಇಟ್ಟಮಡು 5ನೇ ಕ್ರಾಸ್‌ನ ಬಾಡಿಗೆ ಮನೆಯಲ್ಲಿದ್ದ ಅವರು, ಪೇಂಟರ್ ಆಗಿದ್ದರು.ಅವರು ಮಂಗಳವಾರ ರಾತ್ರಿ ಮನೆಯಲ್ಲಿ ಮದ್ಯಪಾನ ಮಾಡಿ, ಹಾಸಿಗೆ ಪಕ್ಕದಲ್ಲೇ ಸೊಳ್ಳೆ ಬತ್ತಿ ಹಚ್ಚಿಟ್ಟು ಮಲಗಿದ್ದರು. ಆ ಸೊಳ್ಳೆ ಬತ್ತಿಯಿಂದ ಹಾಸಿಗೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಆನಂದ್ ಅವರಿಗೂ ವ್ಯಾಪಿಸಿತು. ಪರಿಣಾಮ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.