ಬೆಂಗಳೂರು: ಶಾರ್ಟ್ ಸರ್ಕಿಟ್ನಿಂದ ಹಾರ್ಡ್ವೇರ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋದ ಘಟನೆ ಯಲಹಂಕ ಉಪನಗರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಯಲಹಂಕ ಪೊಲೀಸ್ ಠಾಣೆ ಸಮೀಪವೇ ಇರುವ ಪೂನಂ ಹಾರ್ಡ್ವೇರ್ ಅಂಡ್ ಎಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಈ ಅನಾಹುತ ಸಂಭವಿಸಿದೆ. ಅಂಗಡಿ ಮಾಲೀಕ ಶಿವುಲಾಲ್ ಅವರು ಬೆಳಿಗ್ಗೆ ಒಂಬತ್ತು ಗಂಟೆ ವೇಳೆಗೆ ಮಳಿಗೆಯ ಬಾಗಿಲು ತೆರೆದಿದ್ದರು. 9.20ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಗಾಬರಿಯಾದ ಶಿವು ಮತ್ತು ಸಿಬ್ಬಂದಿ ಬೆಂಕಿ ನಂದಿಸಲು ನೀರು ಎರಚಿದರು. ಆದರೆ ಬೆಂಕಿ ಜ್ವಾಲೆ ಶೀಘ್ರ ವ್ಯಾಪಿಸಿ ಅಂಗಡಿ ಹೊತ್ತಿ ಉರಿಯಲು ಆರಂಭಿಸಿತು.

ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

‘ಅಂಗಡಿಯಲ್ಲಿ ಪೇಂಟ್, ಹಾರ್ಡ್ವೇರ್ ಸಾಮಗ್ರಿ ಮತ್ತು ಎಲೆಕ್ಟ್ರಿಕಲ್ ವಸ್ತುಗಳಿದ್ದ ಕಾರಣ ಬೆಂಕಿ ಬೇಗ ಆವರಿಸಿದೆ’ ಎಂದು ಪಶ್ಚಿಮ ವಲಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಎನ್.ಯು.ಈರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು. ಲಕ್ಷಾಂತರ ರೂಪಾಯಿ ನಷ್ಟ ವಾಗಿದೆ. ಅಂಗಡಿ ಮಾಲೀಕ ದೂರಿನಲ್ಲಿ ನಷ್ಟದ ಮೊತ್ತ ಎಷ್ಟು ಎಂದು ತಿಳಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.