ಶುಕ್ರವಾರ, ಜೂನ್ 18, 2021
20 °C

ಬೆಂಕಿ: ಗಾಯಾಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೀಮೆಎಣ್ಣೆ ಸ್ಟೌನಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಪೀಣ್ಯ ಸಮೀಪದ ರವೀಂದ್ರನಗರದಲ್ಲಿ ನಡೆದಿದೆ.ರವೀಂದ್ರನಗರ ಏಳನೇ ಅಡ್ಡರಸ್ತೆ ನಿವಾಸಿ ಸುರೇಶ್ ಎಂಬುವರ ಪತ್ನಿ ಆದಿಲಕ್ಷ್ಮಿ (26) ಮೃತಪಟ್ಟವರು. ಆಂದ್ರಪ್ರದೇಶ ಮೂಲದ ಆದಿಲಕ್ಷ್ಮಿ ಏಳು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.ಅವರು ಮಾ.6ರಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಅವರಿಗೆ ಬೆಂಕಿ ಹೊತ್ತಿಕೊಂಡು ತೀವ್ರ ಗಾಯಗೊಂಡಿದ್ದರು. ಪತಿ ಹಾಗೂ ಅಕ್ಕಪಕ್ಕದ ಮನೆಯವರು ಅವರನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅವರು ಗುರುವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೀಣ್ಯ ಪೊಲೀಸರು ಹೇಳಿದ್ದಾರೆ.ವ್ಯಕ್ತಿ ಸಾವು: ಪೀಣ್ಯ ಸಮೀಪದ ಬಾಗಲಗುಂಟೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸುಮಾರು 42 ವರ್ಷದ  ಅವರ ಗುರುತು ಪತ್ತೆಯಾಗಿಲ್ಲ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.