ಭಾನುವಾರ, ಜನವರಿ 19, 2020
27 °C

ಬೆಂಕಿ ದುರಂತ: ಸಾವಿನ ಸಂಖ್ಯೆ 7ಕ್ಕೇರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಇಲ್ಲಿನ ದಕ್ಷಿಣ ಮುಂಬೈನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ‌ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯ ಹಾಗೂ ಅಗ್ನಿ ಶಮನದ ವೇಳೆ ಇಬ್ಬರು ಅಧಿಕಾರಿಗಳು ಸೇರಿದಂತೆ ಆರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಕೆಂಪ್ಸ್ ಕಾರ್ನರ್‌ ಪ್ರದೇಶದಲ್ಲಿರುವ 26 ಮಹಡಿಗಳ ಮೌಂಟ್ ಬ್ಲಾಂಕ್ ಕಟ್ಟಡದ 12ನೇ ಅಂತಸ್ತಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

‘ಕಟ್ಟಡ ಏಳು ನಿವಾಸಿಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಮೃತರಲ್ಲಿ ಕೆಲವರ ಗುರುತು ಪತ್ತೆ ಹಚ್ಚಲಾಗಿದೆ. ಇನ್ನು ಕೆಲವರ ಮೃತದೇಹಗಳು ಗುರುತು ಸಿಗದಷ್ಟು ಭೀಕರವಾಗಿ ಸುಟ್ಟಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)