ಭಾನುವಾರ, ಜನವರಿ 19, 2020
26 °C

ಬೆಂಕಿ ಹಚ್ಚಿಕೊಂಡು ಚಾಲಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ವಿಜಯನಗರದ 22ನೇ ಅಡ್ಡರಸ್ತೆಯಲ್ಲಿ ಗುರು­ವಾರ ರಮೇಶ್‌ (45) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಆಟೊ ಓಡಿಸುತ್ತಿದ್ದ ರಮೇಶ್‌, ಕೆಲ ದಿನಗಳಿಂದ ಕ್ಯಾಬ್‌ ಚಾಲನೆ ಮಾಡುತ್ತಿದ್ದರು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯ­ರು, ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಈ ವೇಳೆ­ಗಾಗಲೇ ರಮೇಶ್‌ ದೇಹ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಪೊಲೀಸರು ಹೇಳಿದ್ದಾರೆ.ಪತಿ ಮಾನಸಿಕ ಅಸ್ವಸ್ಥರಾಗಿದ್ದು, ನೊಂದು ಆತ್ಮಹತ್ಯೆ ಮಾಡಿ­ಕೊಂಡಿ­ರಬಹುದು’ ಎಂದು ಪತ್ನಿ ರಾಣಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)