ಗುರುವಾರ , ಮೇ 13, 2021
17 °C

ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಸಮೀಪದ ಪಟ್ಟೇಗಾರಪಾಳ್ಯದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಪಟ್ಟೇಗಾರಪಾಳ್ಯ ಎರಡನೇ ಅಡ್ಡರಸ್ತೆ ನಿವಾಸಿ ಮೇಟಿಗೌಡ (46) ಮತ್ತು ಅವರ ಪತ್ನಿ ಹುಲ್ಲೂರಮ್ಮ (42) ಆತ್ಮಹತ್ಯೆ ಮಾಡಿಕೊಂಡವರು.ಮೇಟಿಗೌಡ ಕೊಳಾಯಿ ರಿಪೇರಿ ಕೆಲಸ ಮಾಡುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗನಿದ್ದಾನೆ. ಹಿರಿಯ ಮಗಳು ವರಲಕ್ಷ್ಮಿ ಅವರ ಮದುವೆಯಾಗಿದ್ದು, ಪತಿಯ ಮನೆಯಲ್ಲಿ ನೆಲೆಸಿದ್ದಾರೆ. ದಂಪತಿ ಎರಡನೇ ಮಗಳು ಕಲಾವತಿ ಮತ್ತು ಮಗ ಹರೀಶ್ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಪಟ್ಟೇಗಾರಪಾಳ್ಯದಲ್ಲೇ ಹುಲ್ಲೂರಮ್ಮ ಅವರ ತವರು ಮನೆ ಇದೆ. ಕಲಾವತಿ ಅಜ್ಜಿ ಮನೆಗೆ ಹಾಗೂ ಹರೀಶ್ ಶಾಲೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದ ದಂಪತಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.ತೀವ್ರ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡ ಅವರಿಬ್ಬರೂ ಮನೆಯಲ್ಲೇ ಮೃತಪಟ್ಟಿದ್ದಾರೆ. ಕಲಾವತಿ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.`ಅಳಿಯ ಮತ್ತು ಮಗಳು ಅನ್ಯೋನ್ಯವಾಗಿದ್ದರು. ಅವರು ಏಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಗೊತ್ತಿಲ್ಲ~ ಎಂದು ಹುಲ್ಲೂರಮ್ಮ ಅವರ ತಂದೆ ವರದರಾಜು ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ. ದಂಪತಿಯ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.ಮೃತರ ಶವಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಒಪ್ಪಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.