ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

7

ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Published:
Updated:

ಬೆಂಗಳೂರು: ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಸಮೀಪದ ಡಿಫೆನ್ಸ್ ಕಾಲೊನಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.ಡಿಫೆನ್ಸ್ ಕಾಲೊನಿ ಎರಡನೇ ಮುಖ್ಯರಸ್ತೆ ನಿವಾಸಿ ಈಶಪ್ಪ ಎಂಬುವರ ಪತ್ನಿ ಸುಜಾತಾ (24) ಆತ್ಮಹತ್ಯೆ ಮಾಡಿಕೊಂಡವರು.ಮೂಲತಃ ಯಾದಗಿರಿ ಜಿಲ್ಲೆಯ ಈಶಪ್ಪ ದಂಪತಿ ಡಿಫೆನ್ಸ್ ಕಾಲೊನಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅವರ ಮದುವೆಯಾಗಿ ಐದು ವರ್ಷವಾಗಿತ್ತು ಮತ್ತು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ತಾತ್ಕಾಲಿಕ ಶೆಡ್‌ನಲ್ಲಿ ವಾಸವಿದ್ದರು ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ.ಸುಜಾತಾ ಅವರು ಕೆಲಸ ಮಾಡುತ್ತಿದ್ದ ಕಟ್ಟಡದ ಕೆಳ ಅಂತಸ್ತಿನಲ್ಲಿ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಘಟನೆ ಸಂಬಂಧ ಸುಜಾತಾ ತಂದೆ ಈಶ್ವರಪ್ಪ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry