ಸೋಮವಾರ, ಜೂನ್ 14, 2021
26 °C

ಬೆಂಗಳೂರಿನಲ್ಲಿ ಇಂದುಪತ್ರಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪತ್ರಕರ್ತರ ಮೇಲೆ ಕೆಲವು ವಕೀಲರು ನಡೆಸಿದ ಹಲ್ಲೆ ಘಟನೆಯನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ ನಗರದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಿದೆ.ರಾಜ್ಯದ ಎಲ್ಲ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ದೌರ್ಜನ್ಯ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಲಿದ್ದಾರೆ. ಬೆಳಿಗ್ಗೆ 10.30 ಕ್ಕೆ ಪ್ರೆಸ್ ಕ್ಲಬ್ ಮುಂದೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪತ್ರಕರ್ತರು ಸಮಾವೇಶಗೊಂಡು ಮಹಾತ್ಮಗಾಂಧಿ ಪ್ರತಿಮೆಯ ಬಳಿ ಮೆರವಣಿಗೆಯಲ್ಲಿ ಸಾಗಲಿದ್ದಾರೆ.ಪತ್ರಕರ್ತರ ಮೇಲೆ ಪದೇಪದೇ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ರಾಜು ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷ ಎಂ.ಎ.ಪೊನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರತಿಭಟನೆಯಲ್ಲಿ ಬೆಂಗಳೂರಿನ ಪ್ರೆಸ್‌ಕ್ಲಬ್,  ವರದಿಗಾರರ ಕೂಟ, ಬೆಂಗಳೂರು ಛಾಯಾಗ್ರಾಹಕರ ಸಂಘ, ಹಿರಿಯ ಪತ್ರಕರ್ತರ ಸಂಘ, ದೃಶ್ಯಮಾಧ್ಯಮದ ಎಲ್ಲ ಪತ್ರಕರ್ತರು ಭಾಗವಹಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.