ಸೋಮವಾರ, ಆಗಸ್ಟ್ 2, 2021
26 °C

ಬೆಂಗಳೂರಿನಲ್ಲಿ ಜೆಡಿಎಸ್ ಸಂಘಟನೆಗೆ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ‘ನಗರ ಜಿಲ್ಲೆ ವ್ಯಾಪ್ತಿಯ ಪ್ರಮುಖರನ್ನು ಭೇಟಿ ಮಾಡಿ ಪಕ್ಷವನ್ನು ಸಂಘಟಿಸುವ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಉಪನಗರದಲ್ಲಿರುವ ಬಿಬಿಎಂಪಿ ಮಾಜಿ ಆಯುಕ್ತ ಡಾ. ಎಸ್.ಸುಬ್ರಹ್ಮಣ್ಯ ಅವರ ನಿವಾಸಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಭಿನ್ನಾಭಿಪ್ರಾಯಗಳಿಂದ ಪಕ್ಷವನ್ನು ಬಿಟ್ಟು ಹೋಗಿರುವ ಮುಖಂಡರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರ ವಿಶ್ವಾಸ ಪಡೆಯುವ ಕಾರ್ಯಕ್ರಮಕ್ಕೆ  ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

‘ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ  ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಮ್ಮ ಪಕ್ಷ ಸೂಚನೆ ಕೊಟ್ಟಿತ್ತು. ಆದರೆ ಅಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತು ಅನಿವಾರ್ಯವಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಯಿತು’ ಎಂದರು.

‘ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಲ್ಲಿಯವರೆಗೆ ನಡೆದಿರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುತ್ತ ಬರಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಬಿಬಿಎಂಪಿ ಮಾಜಿ ಆಯುಕ್ತ ಡಾ. ಎಸ್.ಸುಬ್ರಹ್ಮಣ್ಯ, ಜಿ.ಪಂ. ಸದಸ್ಯ ಬಿ.ಚಂದ್ರಪ್ಪ, ಜೆಡಿಎಸ್ ಮುಖಂಡರಾದ ಮುದ್ದುರಂಗೇಗೌಡ, ವೈ.ಕೆ.ಸುರೇಶ್ ಕುಮಾರ್, ಬಸವರಾಜ ಪಾದಯಾತ್ರಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.