ಶನಿವಾರ, ಮೇ 15, 2021
26 °C

ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮುಂಬರುವ ಭಾರತ ಪ್ರವಾಸದ ವೇಳೆ ಒಂದು ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸುವ ಅವಕಾಶ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಲಭಿಸಿದೆ. ಕಿವೀಸ್ ತಂಡ ಎರಡು ಟೆಸ್ಟ್ ಹಾಗೂ ಎರಡು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳ ಸರಣಿಯನ್ನು ಆಡಲು ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ ಆಗಮಿಸಲಿದೆ.ಟೆಸ್ಟ್ ಪಂದ್ಯಗಳು ಕ್ರಮವಾಗಿ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ನಡೆಯಲಿವೆ ಎಂದು ಸೋಮವಾರ ಸಭೆ ಸೇರಿದ್ದ ಬಿಸಿಸಿಐ ಕಾರ್ಯಕ್ರಮ ಮತ್ತು ವೇಳಾಪಟ್ಟಿ ಸಮಿತಿ ತಿಳಿಸಿದೆ. ಪಂದ್ಯಗಳ ನಿರ್ದಿಷ್ಟ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು.ಆ ಬಳಿಕ ಇಂಗ್ಲೆಂಡ್ ತಂಡದವರು ಭಾರತಕ್ಕೆ ಆಗಮಿಸಲಿದ್ದಾರೆ. ಇಂಗ್ಲೆಂಡ್ ತಂಡದ ಪ್ರವಾಸ ನವೆಂಬರ್‌ನಿಂದ 2013ರ ಜನವರಿ ವರೆಗೆ ಮುಂದುವರಿಯಲಿದೆ. ಈ ವೇಳೆ ಉಭಯ ತಂಡಗಳು ನಾಲ್ಕು ಟೆಸ್ಟ್, ಐದು ಏಕದಿನ ಹಾಗೂ ಎರಡು ಟ್ವೆಂಟಿ-20 ಪಂದ್ಯಗಳಲ್ಲಿ ಎದುರಾಗಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.