ಭಾನುವಾರ, ಮಾರ್ಚ್ 7, 2021
22 °C
ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತುವಿನಿಂದ ಉಂಟಾಗಿದ್ದ ಆತಂಕ

ಬಾಂಬ್‌, ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಂಬ್‌, ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ

ಬೆಂಗಳೂರು: ಬೆಂಗಳೂರಿನ ಕಾವೇರಿ ಜಂಕ್ಷನ್‌ನಲ್ಲಿ ಅನುಮಾನಾಸ್ಪದ ವಸ್ತು (ಬಾಕ್ಸ್‌)ಪತ್ತೆಯಾಗಿ ಆತಂಕ ಉಂಟಾಗಿತ್ತು. ಅದರಲ್ಲಿ ಬಾಂಬ್‌ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಖಚಿತಪಡಿಸಿದ್ದಾರೆ.ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸ್ಥಳೀಯರು ಕಾವೇರಿ ಜಂಕ್ಷನ್‌ನಲ್ಲಿ ಅನುಮಾನಾಸ್ಪದ ಬಾಕ್ಸ್‌ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅನುಮಾನಾಸ್ಪದ ಬಾಕ್ಸ್‌ ಅನ್ನು ತಪಾಸಣೆ ನಡೆಸಿದ್ದಾರೆ.

ಆ ಬಾಕ್ಸ್‌ನಲ್ಲಿ ಮೂರು ಜಾರ್‌ಗಳಿದ್ದು ಅದರಲ್ಲಿ ಮದ್ಯ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಅನುಮಾನಾಸ್ಪದ ಬಾಕ್ಸ್‌ನಲ್ಲಿ  ಬಾಂಬ್‌ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಬೆಂಗಳೂರು ಮಹಾನಗರದ ಪೊಲೀಸ್‌ ಆಯುಕ್ತರಾದ  ಎನ್‌. ಎಸ್‌. ಮೇಘರಿಕ್‌ ಖಚಿತಪಡಿಸಿದ್ದಾರೆ.ಕಟ್ಟೆಚ್ಚರ: ಶಂಕಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ನಗರದೆಲ್ಲಡೆ ಹೈಅಲರ್ಟ್‌ ಘೋಷಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.