ಗುರುವಾರ , ಮೇ 13, 2021
16 °C

ಬೆಂಗಳೂರು: ಅಡುಗೆ ಅನಿಲ ಸ್ಪೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಸುಮ್ಮನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಬುಧವಾರ ಮಧ್ಯಾಹ್ನ ಜರುಗಿದ್ದು, ಅ ಅವಘಡದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ವರದಿಯಾಗಿಲ್ಲ.ಸ್ಫೋಟದಲ್ಲಿ ಸಿಲುಕಿದವರನ್ನು ರಕ್ಷಿಸುವ ಸಮಯದಲ್ಲಿ ಮತ್ತೊಂದು ಅನಿಲ ಸ್ಫೋಟಗೊಂಡಿದೆ. ಆ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿಯೂ ಸೇರಿದಂತೆ ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿದ ಪ್ರಕರಣವೂ ನಡೆಯಿತು.ಅವಶೇಷಗಳ ಅಡಿ ಸಿಲುಕಿದವರಲ್ಲಿ ಮೂವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ಅಗ್ನಿ ಶಾಮಕ ಸಿಬ್ಬಂದ್ಧಿ ಮತ್ತು ಒರ್ವ ಮಹಿಳೆಯನ್ನು ರಕ್ಷಿಸುವ ಕಾರ‌್ಯಾಚರಣೆ ಮುಂದುವರೆದಿದೆ. ಅವಶೇಷಗಳಡಿ ಸಿಲುಕಿರುವವರಿಗೆ ಉಸಿರಾಡಲು ಆಮ್ಲಜನಕದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.