ಶುಕ್ರವಾರ, ಮೇ 27, 2022
23 °C

ಬೆಂಗಳೂರು ಕೃಷಿ ವಿವಿ: ಕೊಯ್ಲೋತ್ತರ ನಿರ್ವಹಣೆ ಕೋರ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ 2011-12 ನೇ ಶೈಕ್ಷಣಿಕ ಸಾಲಿನಲ್ಲಿ ದೂರ ಶಿಕ್ಷಣದ ಮೂಲಕ ಕನ್ನಡ ಮಾಧ್ಯಮದಲ್ಲಿ ಆರು ತಿಂಗಳ ಅವಧಿಯ ಕೊಯ್ಲೋತ್ತರ ನಿರ್ವಹಣೆ  ಸರ್ಟಿಫಿಕೇಟ್ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.ಆಹಾರ ಧಾನ್ಯ, ಹಣ್ಣು ಮತ್ತು ತರಕಾರಿ ಕೊಯ್ಲ್‌ತ್ತರ ನಿರ್ವಹಣೆ  ಸರ್ಟಿಫಿಕೇಟ್ ಕೋರ್ಸ್‌ಗಳು ನಡೆಯಲಿದ್ದು,  7 ತರಗತಿವರೆಗೆ ಓದಿರುವ, ಕನಿಷ್ಠ 18 ವರ್ಷ ತುಂಬಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಐವತ್ತು ರೂಪಾಯಿ ನಗದು, ಡಿ.ಡಿ ಅಥವಾ ಪೋಸ್ಟಲ್ ಮೂಲಕ ಅರ್ಜಿ ಪಡೆದು, ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ವಿಳಾಸ: ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ದೂರಶಿಕ್ಷಣ ವಿಭಾಗ, ಕೃಷಿ ಮಹಾವಿದ್ಯಾಲಯ, ಜಿಕೆವಿಕೆ. ಹೆಚ್ಚಿನ ಮಾಹಿತಿಗೆ 23330153 ಮತ್ತು 94495 51060 ಸಂಪರ್ಕಿಸಲು ಕೋರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.