ಮಂಗಳವಾರ, ಅಕ್ಟೋಬರ್ 22, 2019
21 °C

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ವೇ ಷಟ್ಪಥ ಅಭಿವೃದ್ಧಿಗೆ ಜಪಾನ್ ಆಸಕ್ತಿ

Published:
Updated:

ನವದೆಹಲಿ: ಉದ್ದೇಶಿತ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಜಪಾನ್ ಸರ್ಕಾರ ಆಸಕ್ತಿ ತೋರಿದೆ.

`ಜಪಾನ್ ಮೂಲದ ಕಂಪೆನಿಯು ಈಗಾಗಲೇ ಇದಕ್ಕೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯದಲ್ಲಿ ನಿರತವಾಗಿದ್ದು, ನಮ್ಮ ಸರ್ಕಾರ ಅದನ್ನು ಕಾರ್ಯರೂಪಕ್ಕೆ ಇಳಿಸಲು ಉತ್ಸುಕವಾಗಿದೆ~ ಎಂದು ಜಪಾನ್‌ನ ಭೂಮಿ, ಮೂಲಸೌಕರ್ಯ, ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವ ತಕೇಶಿ ಮಯೇಡ ಗುರುವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಸಿ.ಪಿ.ಜೋಶಿ ಅವರನ್ನು ಇಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ತಿಳಿಸಿದರು.`ನಾವು ಅತ್ಯಂತ ಪಾರದರ್ಶಕವಾದ ವ್ಯವಸ್ಥೆ ಹೊಂದಿದ್ದೇವೆ. ಆದ್ದರಿಂದ ಹರಾಜು ಪ್ರಕ್ರಿಯೆಯಲ್ಲಿ ನೀವು ಭಾಗವಹಿಸಬೇಕಾಗುತ್ತದೆ ಎಂದು ಜಪಾನ್ ಸರ್ಕಾರಕ್ಕೆ ನಾವು ಸ್ಪಷ್ಟಪಡಿಸಿದ್ದೇವೆ~ ಎಂದು ಸಭೆಯ ಬಳಿಕ ಜೋಶಿ ಸುದ್ದಿಗಾರರಿಗೆ ತಿಳಿಸಿದರು.`ಆದಾಗ್ಯೂ ಜಪಾನ್‌ಗೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸುವ ಇಚ್ಛೆ ಇದ್ದರೆ ಅದು ಉನ್ನತ ಮಟ್ಟದಲ್ಲಿ, ಅಂದರೆ ಉಭಯ ದೇಶಗಳ ಪ್ರಧಾನಿಗಳ ನಡುವೆ ಚರ್ಚೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದೇವೆ~ ಎಂದು ಹೇಳಿದರು.ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ವ್ಯವಹಾರ ನಡೆದರೆ ಸಂಬಂಧಪಟ್ಟ ದೇಶಕ್ಕೆ ಖುದ್ದಾಗಿ ಯೋಜನೆ ವಹಿಸಿಕೊಡಲಾಗುತ್ತದೆ. ಇದರಿಂದ ಅಲ್ಲಿನ ಕಂಪೆನಿಗಳು ನೇರವಾಗಿ ಇಲ್ಲಿಗೆ ಬಂದು ಯೋಜನೆಯ ಅಭಿವೃದ್ಧಿಗೆ ಮುಂದಾಗುತ್ತವೆ. ಆಗ ಯೋಜನೆಗೆ ಸಂಬಂಧಿಸಿದ ಹರಾಜಿನಲ್ಲಿ ಭಾಗವಹಿಸುವ ಅವಕಾಶ ಭಾರತದ ಉದ್ಯಮಿಗಳಿಗೆ ಇಲ್ಲವಾಗುತ್ತದೆ.`ಹೆದ್ದಾರಿ ವಲಯದಲ್ಲಿ ಶೇ 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಇರುತ್ತದೆ ಮತ್ತು ಜಪಾನ್ ಕಂಪೆನಿಗಳು ಹರಾಜಿಗಾಗಿ ಸ್ಥಳೀಯ ಕಂಪೆನಿಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಬಹುದು~ ಎಂದು ಸಚಿವರು ತಿಳಿಸಿದರು.ದೇಶದಲ್ಲಿ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ಬರಲಿರುವ ಎಕ್ಸ್‌ಪ್ರೆಸ್‌ವೇ ಯೋಜನೆಯನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಡಿ ನಿರ್ಮಾಣ- ನಿರ್ವಹಣೆ- ಹಸ್ತಾಂತರ (ಬಿಒಟಿ) ಆಧಾರದ ಮೇಲೆ ನಿರ್ಮಿಸಲಾಗುತ್ತದೆ.ಈ ಷಟ್ಪಥ ಯೋಜನೆ ಜಾರಿಗೆ ಬಂದ ಬಳಿಕ ಬೆಂಗಳೂರು- ಚೆನ್ನೈ ಅಂತರ ಈಗಿರುವ 5-6 ಗಂಟೆಗಳಿಂದ ಕೇವಲ ಮೂರು ಗಂಟೆಗಳಿಗೆ ಇಳಿಯಲಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)