ಶುಕ್ರವಾರ, ಜೂನ್ 18, 2021
28 °C

ಬೆಂಗಳೂರು ದಕ್ಷಿಣ: ಶಿವಶಂಕರ್‌ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆಲ್‌ ಇಂಡಿಯಾ ಫಾರ್ವರ್ಡ್‌ ಬ್ಲಾಕ್‌ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಶಿವಶಂಕರ್‌ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಜಿ.ದೇವರಾಜನ್‌ ತಿಳಿಸಿದರು.ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 75ಕ್ಕಿಂತ ಹೆಚ್ಚು ಜನರು ಅಸಂಘಟಿತ ಕಾರ್ಮಿಕರಿದ್ದಾರೆ. ಎಲ್ಲ ಪಕ್ಷಗಳು ಈ ಕಾರ್ಮಿಕರನ್ನು ನಿರ್ಲಕ್ಷಿಸಿವೆ. ಜಿ.ಆರ್‌.ಶಿವಶಂಕರ್‌ ಅವರು ಕಳೆದ ನಾಲ್ಕು ದಶಕಗಳಿಂದ ಕಾರ್ಮಿಕರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಅವಕಾಶ ನೀಡಲಾಗಿದೆ’ ಎಂದು ಹೇಳಿದರು.ಸಿ.ಪಿ.ಐ ಮತ್ತು ಸಿ.ಪಿ.ಎಂ ಪಕ್ಷಗಳು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಲಿವೆ. ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳಿಂದ ಬೇಸತ್ತಿರುವ ಜನರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.