ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ಮುಕ್ತ

7

ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ಮುಕ್ತ

Published:
Updated:

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ (ಕೆಆರ್‌ಎಸ್) ಕಾವೇರಿ ನದಿಗೆ ನೀರು ಬಿಡುವುದನ್ನು ನಿಲ್ಲಿಸಿದ ಕಾರಣ ಮಂಗಳವಾರ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿತ್ತು.ಕಳೆದ 9 ದಿನಗಳಿಂದ ಜಿಲ್ಲೆಯ ವಿವಿಧೆಡೆ ಹೆದ್ದಾರಿ, ರಸ್ತೆ ತಡೆ ನಡೆಸಿದ್ದರಿಂದ, ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.ಸತ್ಯಾಗ್ರಹ ಮುಂದುವರಿಕೆ: ಕಾವೇರಿ ನದಿ ಪ್ರಾಧಿಕಾರದ ಸಭೆ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಸುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry