ಶುಕ್ರವಾರ, ಸೆಪ್ಟೆಂಬರ್ 25, 2020
28 °C

ಬೆಂಗಳೂರು ವಿಜ್ಞಾನಿಗಳಿಗೆ ಮೋದಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು ವಿಜ್ಞಾನಿಗಳಿಗೆ ಮೋದಿ ಪ್ರಶಸ್ತಿ

ನವದೆಹಲಿ (ಪಿಟಿಐ): ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಭೌತವಿಜ್ಞಾನಿ ಎ.ಕೆ. ಸೂದ್ ಹಾಗೂ ಭೂವಿಜ್ಞಾನಿ ಕೆ. ಎಸ್. ವಾಲ್ದಿಯಾ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಸಂಶೋಧನೆಗಾಗಿ ನೀಡಲಾಗುವ ಪ್ರತಿಷ್ಠಿತ ಗುಜರ್ ಮಲ್ ಮೋದಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯು 2.01 ಲಕ್ಷ ನಗದು, ಬೆಳ್ಳಿಯ ಸ್ಮರಣ ಫಲಕ ಹಾಗೂ ಭಿನ್ನವತ್ತಳೆ ಒಳಗೊಂಡಿದೆ.

ದಿವಂಗತ ಗುಜರ್ ಮಲ್ ಅವರ 110ನೇ ಜನ್ಮ ದಿನಾಚರಣೆಯ ದಿನ ಆಗಸ್ಟ್ 7ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೋದಿ ಸಮೂಹದ ಸಂಸ್ಥೆಗಳ ಸ್ಥಾಪಕರಾದ ಅವರ ಸ್ಮರಣಾರ್ಥ 1988ರಿಂದ ವಿಜ್ಞಾನ ಪ್ರಶಸ್ತಿ ನೀಡಲಾಗುತ್ತಿದೆ.ಬೆಂಗಳೂರಿನ ಇಂಡಿಯನ್ ಅಕಾಡೆಮಿ ಆಫ್ ಸೈನ್ಸ್‌ನ ಅಧ್ಯಕ್ಷರಾಗಿರುವ ಎ.ಕೆ. ಸೂದ್, ಸಾಂದ್ರೀಕರಿಸಿದ ದ್ರವ್ಯಗಳ ಅಧ್ಯಯನಕ್ಕೆ ಅಸಾಮಾನ್ಯ ಕೊಡುಗೆ ನೀಡಿದ್ದಾರೆ.ಕೆ. ಎಸ್. ವಾಲ್ದಿಯಾ ಬೆಂಗಳೂರಿನ ಜವಾಹರ್‌ಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಗೌರವ ಪ್ರಾಧ್ಯಾಪಕರಾಗಿದ್ದಾರೆ. ಭೂವಿಜ್ಞಾನ ಹಾಗೂ ಪರಿಸರ ವಿಜ್ಞಾನ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿರುವ ಅವರು, ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.