ಬೆಂಗಳೂರು: `ಸುವರ್ಣ ಗ್ರಾಮೋದಯ~ ಯೋಜನೆಯಡಿ ರಾಜ್ಯ ಸರ್ಕಾರ 2012-13ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಗೆ 18.87 ಕೋಟಿ ರೂಪಾಯಿ ಅನುದಾನ ಕಲ್ಪಿಸಿದೆ. ಈ ಯೋಜನೆಯಡಿ ಆಯ್ಕೆಯಾದ 44 ಗ್ರಾಮ ಪಂಚಾಯ್ತಿಗಳಿಂದ ಪ್ರಸ್ತಾವ ಪಡೆದು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪಂಚಾಯ್ತಿಯ 2012-13ನೇ ಸಾಲಿನ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯ 4 ತಾಲ್ಲೂಕುಗಳಿಗೆ ತಲಾ 4ರಿಂದ 5 ಕೋಟಿ ರೂಪಾಯಿ ಅನುದಾನ ಸಿಗಲಿದೆ. 44 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶವಾಗಿದ್ದು, ವಿಶೇಷವಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿಮೆಂಟ್ ರಸ್ತೆಗಳ ನಿರ್ಮಾಣಕ್ಕೂ ಒತ್ತು ನೀಡಲಾಗುತ್ತದೆ ಎಂದು ಅವರು ವಿವರಿಸಿದರು.

ಉದ್ಯೋಗ ಖಾತರಿ ಯೋಜನೆಗೆ 32.22 ಕೋಟಿ ನಿಗದಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ ಜಿಲ್ಲೆಗೆ 32.22 ಕೋಟಿ ರೂಪಾಯಿ ನಿಗದಿಯಾಗಿದೆ. 98 ಗ್ರಾಮ ಪಂಚಾಯ್ತಿಗಳಿಗೆ 6.94 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 55 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. 3305 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಕಾಮಗಾರಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

ಪ್ರಸಕ್ತ ವರ್ಷದಿಂದ ವಿದ್ಯುನ್ಮಾನ ನಿಧಿ ನಿರ್ವಹಣೆ ಪದ್ಧತಿಯಡಿ ಕೂಲಿಕಾರರಿಗೆ ವಾರಕ್ಕೊಮ್ಮೆ ಅವರ ಖಾತೆಗೆ ಕೂಲಿ ಜಮೆ ಮಾಡಲಾಗುತ್ತದೆ. ಕುಡಿಯುವ ನೀರು ಯೋಜನೆಯಡಿ ನಿಗದಿಪಡಿಸಿದ 37 ಕೋಟಿ ರೂಪಾಯಿಗಳ ಅನುದಾನದಲ್ಲಿ 981 ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಮುಂದುವರೆದ 120 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹೊಸ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಪ್ರಸಕ್ತ ಸಾಲಿನಲ್ಲಿ 2.57 ಕೋಟಿ ರೂಪಾಯಿ ವೆಚ್ಚ ಮಾಡಿ 80 ಮುಂದುವರೆದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

13ನೇ ಹಣಕಾಸು ಯೋಜನೆಯಡಿ 2012-13ನೇ ಸಾಲಿಗೆ ಜಿ.ಪಂ.ಗೆ 196.80 ಲಕ್ಷ ಅನುದಾನ ನಿಗದಿಯಾಗಿದೆ. ಈ ಅನುದಾನವನ್ನು ರಸ್ತೆ ಕಾಮಗಾರಿಗಳಿಗೆ ಖರ್ಚು ಮಾಡಲಾಗುತ್ತಿದ್ದು, ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

ವಸತಿ ಯೋಜನೆ: ಬಸವ ವಸತಿ ಯೋಜನೆಯಡಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಲಾ ಎರಡು ಸಾವಿರ ಮನೆಗಳ ನಿರ್ಮಾಣ ಗುರಿ ಹೊಂದಲಾಗಿದೆ. ಒಟ್ಟು ಜಿಲ್ಲೆಗೆ 10,141 ಫಲಾನುಭವಿಗಳ ಪಟ್ಟಿಗೆ ಅನುಮೋದನೆ ದೊರೆತಿದ್ದು, 63,500 ರೂಪಾಯಿಗಳ ಘಟಕ ವೆಚ್ಚದಲ್ಲಿ ಮನೆ ನಿರ್ಮಿಸಲು ಕ್ರಮ ವಹಿಸಲಾಗಿದೆ. ಇದುವರೆಗೆ 1,281 ಮನೆಗಳನ್ನು ಪೂರ್ಣಗೊಳಿಸಲಾಗಿದ್ದು, 4,044 ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದು ಸಿಇಒ ತಿಳಿಸಿದರು.

ಸಣ್ಣ ನೀರಾವರಿ: ಈ ಯೋಜನೆಯಡಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿ ರೂಪಾಯಿಗಳಂತೆ ಒಟ್ಟು ನಾಲ್ಕು ಕ್ಷೇತ್ರಗಳಿಗೆ 20 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸಿ, 113 ಕೆರೆಗಳ ಮೋಜಿಣಿ, ದುರಸ್ತಿ ಹಾಗೂ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಸರ್ಕಾರದಿಂದ 11.04 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ 72 ಕೆರೆಗಳ ಹೂಳೆತ್ತುವ ಕಾಮಗಾರಿ ಮುಗಿದಿದೆ. ಏರಿ ಹಾಗೂ ಕೋಡಿಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಈ ಉದ್ದೇಶಕ್ಕಾಗಿ 6.30 ಕೋಟಿ ರೂಪಾಯಿ ಖರ್ಚಾಗಿದೆ ಎಂದರು. ಭಾಗ್ಯಮ್ಮ, ಶಾಂತಮ್ಮ, ಶಂಕರನಾರಾಯಣ ಹಾಗೂ ಜಿ.ಪಂ.ನ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.