ಬುಧವಾರ, ಏಪ್ರಿಲ್ 14, 2021
24 °C

ಬೆಟ್ಟಿಂಗ್ ದಂಧೆ ಮಟ್ಟಹಾಕಲು ಅಗತ್ಯ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:‘ವಿಶ್ವಕಪ್ ಕ್ರಿಕೆಟ್ ಪಂದ್ಯಗಳ ವೇಳೆಯಲ್ಲಿ ನಡೆಯುವ ಬೆಟ್ಟಿಂಗ್ ದಂಧೆಯನ್ನು ಮಟ್ಟಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಗೃಹ ಸಚಿವ ಆರ್.ಅಶೋಕ ಹೇಳಿದರು. ಕುಮಾರಸ್ವಾಮಿ ಬಡಾವಣೆಯಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಬುಕ್ಕಿಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಈಗಾಗಲೇ 15 ಮಂದಿಯನ್ನು ಬಂಧಿಸಲಾಗಿದೆ. ಇನ್ನಷ್ಟು ಮಂದಿಯನ್ನು ಬಂಧಿಸಲಾಗುವುದು’ ಎಂದು ಹೇಳಿದರು.ಬೆಂಗಳೂರು ಹಾಗೂ ಬಳ್ಳಾರಿ ಮೂಲದ ಬುಕ್ಕಿಗಳನ್ನು ಬಂಧಿಸಲಾಗಿದ್ದು, ಇತರ ನಗರಗಳಲ್ಲಿ ಕ್ರಿಯಾಶೀಲವಾಗಿರುವವರನ್ನು ಬಂಧಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಇಂಥವರು ಭೂಗತ ಲೋಕದ ನಂಟು ಹೊಂದುವ ಮೂಲಕ ರಾಜ್ಯಕ್ಕೆ ಸಮಸ್ಯೆ ತಂದೊಡ್ಡುತ್ತಾರೆ. ಆದ್ದರಿಂದ ಅವರನ್ನು ಈ ಹಂತದಲ್ಲೇ ಮಟ್ಟಹಾಕಲು ಕಠಿಣ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಅವರು ನುಡಿದರು.

ಇಡೀ ಭಾರತದಲ್ಲಿಯೇ ರಾಜ್ಯವು ಬುಕ್ಕಿಗಳ ಹಾವಳಿಯಿಂದ ಮುಕ್ತವಾಗಿದೆ. ಈಗಾಗಲೇ ಬಂಧಿಸುವ ಬುಕ್ಕಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಅವರು ಹೊಂದಿರುವ ಭೂಗತ ಲೋಕದ ನಂಟನ್ನು ಬಯಲಿಗೆಳೆಯಲಾಗುವುದು ಎಂದು ಸಚಿವ ಅಶೋಕ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.